

ಬೆಳ್ತಂಗಡಿ: ಶ್ರೀ ಸೋಮನಾಥೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಡಿ. 15 ರಂದು ನಡೆಯಿತು.
ಸಭೆಯಲ್ಲಿ ದೇವಳದ ಅನುವಂಶೀಯ ಆಡಳಿತ ಮೊಕ್ತೇಸರರು ತಿಮ್ಮಣ್ಣರಸರಾದ ಪದ್ಮಪ್ರಸಾದ ಅಜಿಲ, ಬೆಳ್ತಂಗಡಿಯ ಮಾನ್ಯ ಶಾಸಕ ಹರೀಶ್ ಪೂಂಜ, ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ, ಬೆಸ್ಟ್ ಫೌಂಡೇಶನ್ ಬೆಳ್ತಂಗಡಿ ಇದರ ಅಧ್ಯಕ್ಷ ರಕ್ಷಿತ್ ಶಿವರಾಂ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಯೋಗೀಶ್ ಕುಮಾರ್ ನಡಕ್ಕರ, ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಸಂಚಾಲಕ ಶಿವಪ್ರಸಾದ ಅಜಿಲ, ಕಾರ್ಯಾಧ್ಯಕ್ಷ ದೇವೇಂದ್ರ ಹೆಗ್ಡೆ ಕೊಕ್ರಾಡಿ, ಉಪಾಧ್ಯಕ್ಷ ಗಂಗಾಧರ ಮಿತ್ತಮಾರು, ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಶೆಟ್ಟಿ ನೊಚ್ಚ ಹಾಗೂ ಕ್ಷೇತ್ರದ ಭಕ್ತಾಧಿಗಳು ಉಪಸ್ಥಿತರಿದ್ದಾರೆ.