ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಇಲ್ಲಿನ ವಾರ್ಷಿಕ ಪ್ರತಿಭಾ ದಿನವು ಡಿ.13ರಂದು ನಡೆಯಿತು. ಪ್ರತಿಭಾ ದಿನಾಚರಣೆಯ ಪ್ರಯುಕ್ತ ಏರ್ಪಡಿಸಿದ್ದ ಸಾಂಸ್ಕೃತಿಕ ಹಾಗೂ ಕ್ರೀಡಾ ಸ್ಪರ್ಧೆಗಳ ಬಹುಮಾನವನ್ನು ಬೆಳಾಲು ಗ್ರಾಮ ಪಂಚಾಯತಿ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ ಗೌಡ ವಿತರಿಸಿ, “ಎಲ್ಲರೂ ಸ್ಪರ್ಧೆ ನೀಡಿದಾಗ ಮಾತ್ರ ಪ್ರತಿಭೆ ಇರುವರು ವಿಜಯಗಳಾಗಬಹುದು. ನಾವು ಸಿಕ್ಕ ಅವಕಾಶಗಳನ್ನು ಬಳಸಿಕೊಂಡು ಪ್ರತಿಭೆಯನ್ನು ವಿಕಾಸ ಪಡಿಸುವಂತಿರಬೇಕು” ಎಂದು ತಿಳಿಸಿದರು.
ವೇದಿಕೆಯಲ್ಲಿ ಶಿಕ್ಷಕರಕ್ಷಕ ಸಂಘದ ಅಧ್ಯಕ್ಷೆ ಭವಾನಿ ಮಾರ್ಪಾಲು ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶಶಿಧರ ಓಡಿಪ್ರೊಟ್ಟು ಇವರು ಬಹುಮಾನವನ್ನು ವಿತರಿಸಿ, ಶುಭ ಹಾರೈಸಿದರು. ಶಾಲಾ ಮುಖ್ಯ ಶಿಕ್ಷಕ ಜಯರಾಮ ಮಯ್ಯ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದ ಈ ಕಾರ್ಯಕ್ರಮದಲ್ಲಿ, ಶಿಕ್ಷಕಿ ಶ್ರೇಯಶ್ರೀ ವಂದಿಸಿ, ಶಿಕ್ಷಕಿ ಕೋಕಿಲ ನಿರೂಪಿಸಿದರು. ಶಿಕ್ಷಕ ಗಣೇಶ್ವರ್ ಹಾಗೂ ಕೃಷ್ಣಾನಂದ ಇವರು ಕ್ರಮವಾಗಿ ಸಾಂಸ್ಕೃತಿಕ ಹಾಗೂ ಕ್ರೀಡಾ ಸ್ಪರ್ಧೆಗಳ ಬಹುಮಾನ ವಿಜೇತರ ಪಟ್ಟಿಯನ್ನು ವಾಚಿಸಿದರು. ಶಾಲಾ ನಾಯಕ ಲೋಕೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಬಳಿಕ ಬೆಳಾಲು ಲಕ್ಷ್ಮಣಗೌಡ ಇವರಿಂದ ತರಬೇತಿ ಪಡೆದ ವಿದ್ಯಾರ್ಥಿಗಳಿಂದ ಶಶಿ ಪ್ರಭಾ ಪರಿಣಯ ಯಕ್ಷಗಾನ ಬಯಲಾಟ ನಡೆಯಿತು. ನಂತರ ಎಲ್ಲಾ ವಿದ್ಯಾರ್ಥಿಗಳು ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ದಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರಚುರಪಡಿಸಿದರು. ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಧನ್ಯ ಕುಮಾರ್ ಎಂ ಇವರು ಉಪಸ್ಥಿತರಿದ್ದು, ಶಾಲೆಯ ವಾರ್ಷಿಕ ಸಂಚಿಕೆ ವಿದ್ಯಾರ್ಥಿ ಹಸ್ತಪ್ರತಿ ‘ನವ್ಯ ಜ್ಯೋತಿ’ ಇದನ್ನು ಬಿಡುಗಡೆಗೊಳಿಸಿ ಶಾಲೆಯ ವಿಶೇಷ ಪ್ರತಿಭೆಗಳನ್ನು ಪುರಸ್ಕರಿಸಿದರು.
ಯಕ್ಷಗಾನ ನಾಟ್ಯ ತರಬೇತಿಯ ಗುರುಗಳಾದ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಲಕ್ಷ್ಮಣ ಗೌಡ ಪಿ., ಕರಾಟೆ ತರಬೇತುದಾರ ಮಿಥುನ್ ಮತ್ತು ವರ್ಗಾವಣೆಗೊಂಡ ಶಿಕ್ಷಕ ಜಗದೀಶ್ ಇವರನ್ನು ಶಾಲೆಯ ವತಿಯಿಂದ ಗೌರವಿಸಲಾಯಿತು. ಕಳೆದ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯ ಸಾಧಕರನ್ನು ಹಾಗೂ ಈ ವರ್ಷ ರಾಜ್ಯಮಟ್ಟದಲ್ಲಿ ಕಣಾದ ಪ್ರಬಂಧ ಸ್ಪರ್ಧೆಯಲ್ಲಿ ತೃತೀಯ ಬಹುಮಾನ ಪಡೆದ ಇಂದುಮತಿ ಹಾಗೂ ಕರಾಟೆ ಸ್ಪರ್ಧೆಯಲ್ಲಿ ರಾಜ್ಯಮಟ್ಟದಲ್ಲಿ ಭಾಗವಹಿಸಿದ ಜಾಹ್ನವಿ ಇವರನ್ನು ಸ್ಮರಣಿಕೆ ನೀಡಿ ಗುರುತಿಸಲಾಯಿತು. ಎಸ್ ಡಿ ಎಮ್ ಸೆಕೆಂಡರಿ ಶಾಲೆಯ ಮುಖ್ಯ ಶಿಕ್ಷಕ ಸುರೇಶ್ ಹಾಗೂ ಎಸ್ ಡಿ ಎಮ್ ಪ್ರೌಢಶಾಲೆ ಪೆರಿಂಜೆಯ ಮುಖ್ಯ ಶಿಕ್ಷಕ ಮುಕುಂದ ಚಂದ್ರ ಹಾಗೂ ಹಳೆ ಪೇಟೆ ಉಜಿರೆಯ ಸಮೂಹ ಸಂಪನ್ಮೂಲ ವ್ಯಕ್ತಿ ಪ್ರತಿಮಾ ಮತ್ತು ಕರ್ನಾಟಕ ಯಕ್ಷಗಾನ ಅಕಾಡೆಮಿಯ ಸದಸ್ಯ ದಯಾನಂದ ಪಿ ಬೆಳಾಲು ಇವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ಪ್ರತಿಭೆಗಳನ್ನು ಗೌರವಿಸಿದರು.