p>
ಬೆಳ್ತಂಗಡಿ: ವೇಣೂರು ದೇವಾಡಿಗ ಸೇವಾ ವೇದಿಕೆಯಿಂದ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿವೇತನ ಡಿ. 15 ರಂದು ನಡೆಯಿತು. ಉದ್ಘಾಟನೆಯನ್ನು ಗುಜರಾತ್ ಉದ್ಯಮಿ ಶೇಖರ ದೇವಾಡಿಗ ಪಾಲಬೆ ಉದ್ಘಾಟನೆಯನ್ನು ಮಾಡಿದರು. ಬೆಸ್ಟ್ ಪೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ಪ್ರತಿಭಾ ಪುರಸ್ಕಾರ ವಿತರಣೆ ಮಾಡಿದರು. ವಿದ್ಯಾರ್ಥಿ ವೇತನವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ ವಿದ್ಯಾರ್ಥಿ ವೇತನವನ್ನು ವಿತರಣೆ ಮಾಡಿದರು.
ಗರ್ಡಾಡಿಯ ನಾಟಿ ವೈದ್ಯ ಸಂಜೀವ ದೇವಾಡಿಗ ಇವರನ್ನು ಈ ಸಂಧರ್ಭದಲ್ಲಿ ಸನ್ಮಾನಿಸಿದರು. ಈ ಸಂಧರ್ಭದಲ್ಲಿ ಶಾಸಕ ಹರೀಶ್ ಪೂಂಜ, ನಿವೃತ್ತ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಚೆನ್ನಪ್ಪ ಮೊಲಿ, ವೇಣೂರು ಗ್ರಾಮ ಪಂಚಾಯತ್ ಅಧ್ಯಕ್ಷ ಮಲ್ಲಿಕಾ ಹೆಗ್ಡೆ, ಕುಕ್ಕೇಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಅನಿತಾ ಉಪಸ್ಥಿತರಿದ್ದರು.
p>