ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶುದ್ಧಗಂಗಾ, ಕೆರೆ ಅಭಿವೃದ್ಧಿ ಸಮಿತಿ ಸದಸ್ಯರೊಂದಿಗೆ ಸಂವಾದ ಹಾಗೂ ಮಾರ್ಗದರ್ಶನ ಕಾರ್ಯಕ್ರಮ ಡಿ. 17ರಂದು ಕೇಂದ್ರ ಕಛೇರಿಯ ಸಭಾಂಗಣದಲ್ಲಿ ನಡೆಯಿತು. ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತು ಡಾ. ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆ ಉದ್ಘಾಟಿಸಿ ಮಾರ್ಗದರ್ಶನ ಆಶೀರ್ವಚನ ನೀಡಿದರು.
ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್ ಎಸ್. ಎಸ್. ಪ್ರಸ್ತಾವಿಕವಾಗಿ ಮಾತನಾಡಿದರು. ಯೋಜನೆಯ ಸಮುದಾಯ ವಿಭಾಗದ ಪ್ರಾದೇಶೀಕ ನಿರ್ದೇಶಕ ಆನಂದ ಸುವರ್ಣ ಸ್ವಾಗತಿಸಿದರು. ಕೆರೆ ಅಭಿವೃದ್ಧಿ ಸಮಿತಿ ಸದಸ್ಯರುಗಳಾದ ಶಿವಮೊಗ್ಗ ಕೋಟೆಗಂಗೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಿವಕುಮಾರ್, ಕಿತ್ತೂರು ಕೆರೆ ಸಮಿತಿ ಸದಸ್ಯ ಮಲ್ಲಿಕಾರ್ಜುನ ಹುದಲಿ ಅನಿಸಿಕೆ ವ್ಯಕ್ತ ಪಡಿಸಿದರು. ನಿರ್ದೇಶಕ ಶಿವಾನಂದ ಆಚಾರ್ಯ ನಿರೂಪಿಸಿ, ಇಂಜಿನಿಯರ್ ನಿಂಗರಾಜ್ ವಂದಿಸಿದರು.
ಬಳಿಕ ರಾಜ್ಯದ ಕೆರೆ ಸಮಿತಿ ಸದಸ್ಯರಿಗೆ ಜಲ ತಜ್ಞ ಶಿವಾನಂದ ಕಳವೆ ಇವರಿಂದ ಮಾಹಿತಿ ಕಾರ್ಯಕ್ರಮ ನಡೆಯಿತು. ರಾಜ್ಯದ 21 ಜಿಲ್ಲೆಯ 60 ಕೆರೆ ಸಮಿತಿ ಸದಸ್ಯರು, ಯೋಜನೆಯ ನಿರ್ದೇಶಕರು, ಸಿಬ್ಬಂದಿಗಳು ಹಾಜರಿದ್ದರು. ಇದೆ ಸಂದರ್ಭದಲ್ಲಿ ಬೇಲೂರು ಜಿಲ್ಲೆಯ ಚೋಡಹಳ್ಳಿಯ 800ನೇ ಕೆರೆಯನ್ನು ಆನ್ ಲೈನ್ ಮೂಲಕ ಹಸ್ತಾಂತರ ಮಾಡಲಾಯಿತು.