ಬೆದ್ರಬೆಟ್ಟು: ಮರಿಯಾಂಬಿಕಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ ಸ್ಪಾರ್ಕ್ 2024-25 ಡಿ. 17 ರಂದು ಶಾಲಾ ವಾರ್ಷಿಕ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಯಿತು. ಕ್ರೀಡಾಕೂಟದ ವೇದಿಕೆಯಲ್ಲಿ ಮುಖ್ಯ ಅತಿಥಿಯಾಗಿ ಗುರುವಾಯನಕೆರೆ ಎಕ್ಸೆಲ್ ಕಾಲೇಜು ಚೇರ್ಮನ್ ಸುಮಂತ್ ಕುಮಾರ್ ಜೈನ್. ಬಿ., ಗೌರವ ಅತಿಥಿಗಳಾಗಿ ಶಿಬಿ ಧರ್ಮಸ್ಥಳ.
ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಶಾಲಾ ಸಂಚಾಲಕ ವಂದನೀಯ ಫಾದರ್ ಸೆಬಾಸ್ಟಿಯನ್, ಅಥಿತಿಗಳಾಗಿ ಚರ್ಚ್ ಕಮಿಟಿ ಸದಸ್ಯ ಸಜಿ ಒ. ಎಸ್., ಶಾಲಾ ಆಡಳಿತ ಮಂಡಳಿಯ ಸದಸ್ಯ ಫ್ರಾನ್ಸಿಸ್ ವಾಳುಕಾರಣ್, ಶಾಲಾ ಮುಖ್ಯಶಿಕ್ಷಕಿ ವಂದನೀಯ ಸಿಸ್ಟರ್ ಶೆರಿನ್ ಉಪಸ್ಥಿತರಿದ್ದರು.
ಶಾಲಾ ವಿದ್ಯಾರ್ಥಿಗಳು ಪ್ರಾರ್ಥನಾ ಗೀತೆಯನ್ನು ಕಾರ್ಯಕ್ರಮದ ಆರಂಭಕ್ಕೆ ಹಾಡಿದರು. ವೇದಿಕೆಯಲ್ಲಿರುವ ಗಣ್ಯರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಸುಮಂತ್ ಕುಮಾರ್ ಜೈನ್ ಶಾಲಾ ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ಕ್ರೀಡಾ ಸಾಧನೆಗೆ ಮೆಚ್ಚುಗೆ ವ್ಯಕ್ತ ಪಡಿಸಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಕಾರ್ಯಕ್ರಮದ ಗೌರವ ಅತಿಥಿಗಳಾಗಿ ಉಪಸ್ಥಿತರಿದ್ದ ಶಿಬಿ ಧರ್ಮಸ್ಥಳ ಇವರು ಕ್ರೀಡಾಕೂಟಕ್ಕೆ ಚಾಲನೆಯನ್ನು ನೀಡಿದರು. ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಶಾಲಾ ವಿದ್ಯಾರ್ಥಿಗಳು ಕ್ರೀಡಾ ಜ್ಯೋತಿಯನ್ನು ಬೆಳಗಿದರು. ಶಾಲಾ ಶಿಸ್ತಿನ ಬ್ಯಾಂಡ್ ಸೆಟ್ ನ ಜೊತೆಗೆ ವಿದ್ಯಾರ್ಥಿಗಳ 5 ತಂಡಗಳ ಪಥ ಸಂಚಲನ ನಡೆಯಿತು. ಶಾಲಾ ವಿದ್ಯಾರ್ಥಿ ನಾಯಕ ಯಶಸ್ 10 ನೇ ತರಗತಿ ಇವರು ಕ್ರೀಡಾ ಪ್ರತಿಜ್ಞೆಯನ್ನು ಬೋಧಿಸಿ, ಉಳಿದ ವಿದ್ಯಾರ್ಥಿಗಳು ಅದನ್ನು ಮರು ಉಚ್ಚರಿಸಿದರು.
ಇದೇ ಸಂಧರ್ಭದಲ್ಲಿ ಶಾಲಾ ವಿದ್ಯಾರ್ಥಿಗಳ ಡ್ಯಾನ್ಸ್ ಮತ್ತು ಕರಾಟೆ ಪ್ರದರ್ಶನ ನಡೆಯಿತು. ಶೈಕ್ಷಣಿಕ ವರ್ಷದಲ್ಲಿ ಹಮ್ಮಿಕೊಳ್ಳಲಾದ ಸಹಪಠ್ಯ ಚಟುವಟಿಕೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಅಭಿನಂದಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕ ವೃಂದ, ಪೋಷಕರು, ಹಳೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಸಹಶಿಕ್ಷಕ ಕೃಷ್ಣಪ್ಪ ನಿರ್ವಹಿಸಿ, ವಿದ್ಯಾರ್ಥಿ ಕ್ಯಾಥರಿನ್ ಸ್ವಾಗತಿಸಿ, ಸಹ ಶಿಕ್ಷಕಿ ಜಯಲಕ್ಷ್ಮಿ ವಂದಿಸಿದರು.