p>
ಕನ್ಯಾಡಿ: ಇಲ್ಲಿನ ಆರ್ಲ ಕ್ರಾಸ್ ಬಳಿ ಖಾಸಗಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು,ಬೈಕ್ ಸವಾರ ಗಂಭೀರ ಗಾಯಗೊಂಡಿರುವುದಾಗಿ ತಿಳಿದುಬಂದಿದೆ.
ಡಿ.18ರ ರಾತ್ರಿ 11 ಗಂಟೆಯ ಸುಮಾರಿಗೆ ಅಪಘಾತ ಸಂಭವಿಸಿದ್ದು,ಬೈಕ್ ಸವಾರ ಉಜಿರೆಯ ತಿಮ
ರೋಡಿ ನಿವಾಸಿ ಸುರೇಂದ್ರ ಎಂದು ತಿಳಿದು ಬಂದಿದೆ. ಗಂಭೀರ ಗಾಯಗೊಂಡಿರುವ ಬೈಕ್ ಸವಾರನನ್ನು ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆಯ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗಿರುವುದಾಗಿ ತಿಳಿದುಬಂದಿದೆ.
p>