ಧರ್ಮಸ್ಥಳ: ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಾಂಬೋಡಿಯದಿಂದ ಆಗಮಿಸಿದ ತಂಡದಿಂದ ಶ್ರೀ. ಧರ್ಮಸ್ಥಳ ಮಂಜುನಾಥೇಶ್ವರ ಕಲಾ ಕೇಂದ್ರ ಉಜಿರೆ ಇವರ ಸಹಯೋಗದೊಂದಿಗೆ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮ ನಡೆಯಿತು.
ಈ ಕಾರ್ಯಕ್ರಮ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಪ್ರಾರ್ಥನಾ ನೃತ್ಯದೊಂದಿಗೆ ಆರಂಭವಾಗಿ ಕಾಂಬೋಡಿಯಾದ ಅತಿಥಿಗಳು ದೀಪ ಪ್ರಜ್ಜಲನೆ ಮಾಡುವುದರ ಮುಖಾಂತರ ಮುಂದುವರಿಯಿತು.
ಅವರು ತಮ್ಮ ದೇಶದ ಸಾಂಸ್ಕೃತಿಕ ಕಾರ್ಯಕ್ರಮವನ್ನು ನೀಡಿ ಅವರ ಸಂಸ್ಕೃತಿಯನ್ನು ವಿದ್ಯಾರ್ಥಿಗಳ ಮುಂದೆ ಅನಾವರಣಗೊಳಿಸಿದರು. ಶಾಲೆಯಲ್ಲಿನ ವಿವಿಧ ಚಟುವಟಿಕೆಗಳನ್ನು ವೀಕ್ಷಿಸಿ ಸಂಭ್ರಮಪಟ್ಟರು.
ಶಾಲಾ ಮುಖ್ಯೋಪಾಧ್ಯಾಯಿನಿ ಪರಿಮಳ ಎಂ. ವಿ ಅತಿಥಿ ಅಭ್ಯಾಗತರನ್ನು ಪರಿಚಯಿಸಿ ಪುಷ್ಪಗುಚ್ಛವನ್ನು ನೀಡಿ ಸ್ವಾಗತಿಸಿದರು. ಶಾಲಾ ಸಹ ಶಿಕ್ಷಕಿ ಆಶಾ ಕುಮಾರಿ ಪಿ. ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.
ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಧರ್ಮಸ್ಥಳ ಇಲ್ಲಿನ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಮತ್ತು ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಈ ಕಾರ್ಯಕ್ರಮಕ್ಕೆ ಸಾಕ್ಷಿಗಳಾದರು.