Site icon Suddi Belthangady

ವಿ. ಪ. ಶಾಸಕ ಸಿ. ಟಿ. ರವಿ ಮೇಲೆ ಹೆಬ್ಬಾಳ್ಕರ್ ಬೆಂಬಲಿಗರಿಂದ ಹಲ್ಲೆ – ಸ್ವೀಕಾರಾರ್ಹವಲ್ಲ ಪ. ಪಂ. ಅಧ್ಯಕ್ಷ ಜಯಾನಂದ ಗೌಡ

ಬೆಳ್ತಂಗಡಿ: ಬೆಳಗಾವಿಯ ಸುವರ್ಣ ಸೌಧದ ಚಿತ್ರಶಾಲೆಯಲ್ಲಿ ವಿಧಾನ ಪರಿಷತ್‌ ಸದಸ್ಯ ಸಿ. ಟಿ. ರವಿ ಮೇಲೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಳ‌ರ್ ಬೆಂಬಲಿಗರು ಅಧಿವೇಶನದ ನಡುವೆಯೇ ಮಾರಣಾಂತಿಕ ಹಲ್ಲೆಗೆ ಯತ್ನಿಸಿ ಕೊಲೆ ಬೆದರಿಕೆ ಹಾಕಿರುವುದನ್ನು ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ ಖಂಡಿಸಿದ್ದಾರೆ.

ಕಾಂಗ್ರೆಸ್ ಸರಕಾರದಲ್ಲಿ ಜನಪ್ರತಿನಿಧಿಗಳಿಗೆ ರಕ್ಷಣೆ ಇಲ್ಲ. ಗೂಂಡಾ ಸರಕಾರ ಮತ್ತು ಗೂಂಡಾ ಪೊಲೀಸ್ ರ ಈ ಕೃತ್ಯವನ್ನು ಉಗ್ರವಾಗಿ ಖಂಡಿಸುತ್ತೇನೆ. ಪೊಲೀಸ್ ನವರು ಸಿ. ಟಿ. ರವಿಯನ್ನು ಬಂಧಿಸಿದ ರೀತಿ ಸ್ವೀಕಾರಾರ್ಹವಲ್ಲ ಎಂದು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Exit mobile version