ಬೆಳ್ತಂಗಡಿ: ಅಕ್ರಮವಾಗಿ ಯಾವುದೇ ಪರವಾನಿಗೆ ಇಲ್ಲದೆ ಸಾಗಿಸುತ್ತಿದ್ದ (ಗುಜರಿ) ಗಬ್ಬಿಣದ ಲಾರಿಯನ್ನು ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳು ಜಪ್ತಿ ಮಾಡಿದ್ದು, ಈ ವೇಳೆ ಲಾರಿ ಚಾಲಕ ಚಿಕ್ಕಮಗಳೂರಿನ ರಾಜು ಜಿ. ಎಂಬಾತ ವಾಹನ ಬಿಟ್ಟು ಪರಾರಿಯಾಗಿದ್ದು ವಾಹನವನ್ನು ಬೆಳ್ತಂಗಡಿ ಪೊಲೀಸರ ವಶಕ್ಕೆ ನೀಡಿದ್ದಾರೆ.
ಬೆಳ್ತಂಗಡಿ ನಗರದ ಹಳೆಪೇಟೆಯಲ್ಲಿ ಯಾವುದೇ ಪರವಾನಿಗೆ ಇಲ್ಲದೆ KA-18-C-5907 ಅಶೋಕ್ ಲೈಲ್ಯಾಂಡ್ ಕಂಪನಿಯ ಲಾರಿಯಲ್ಲಿ ಕಬ್ಬಿಣದ ವಸ್ತುಗಳನ್ನು (ಗುಜರಿ) ಗುರುವಾಯನಕೆರೆಯಿಂದ ಬೆಳ್ತಂಗಡಿ ಕಡೆಗೆ ಸಾಗಿಸುತ್ತಿದ್ದಾಗ ಡಿ.16 ರಂದು ರಾತ್ರಿ ಸುಮಾರು 9 ಗಂಟೆಗೆ ಮಂಗಳೂರು ಪಶ್ಚಿಮ ವಲಯದ ವಾಣಿಜ್ಯ ತೆರಿಗೆ ಸಹಾಯಕ ಅಯುಕ್ತ ಜಾರಿ-1 ಸತೀಶ್ ಬಟ್ವಾಡಿ ನೇತೃತ್ವದ ತಂಡ ಕರ್ತವ್ಯದಲ್ಲಿರುವಾಗ ತಡೆದು ನಿಲ್ಲಿಸಿ ಲಾರಿಯನ್ನು ತಪಾಸಣೆ ಮಾಡಿದಾಗ ದಾಖಲೆಗಳನ್ನು ನೀಡದೆ ಲಾರಿ ಚಾಲಕ ವಾಹನ ಬಿಟ್ಟು ಪರಾರಿಯಾಗಿದ್ದು.
ಈ ವೇಳೆ ಸರಕಾರದ ಯಾವುದೇ ದಾಖಲೆಗಳು ಇಲ್ಲದೆ ಅಕ್ರಮ ಸಾಗಾಟ ಮಾಡಿರುವುದು ಪತ್ತೆಯಾಗಿರುತ್ತದೆ.ಲಾರಿಯನ್ನು ಬೆಳ್ತಂಗಡಿ ಪೊಲೀಸರ ವಶಕ್ಕೆ ನೀಡಿ ವಾಹನದ ಮಾಲೀಕರಿಗೆ ನೋಟಿಸ್ ನೀಡಿದ್ದು. ಈ ಬಗ್ಗೆ ವಾಣಿಜ್ಯ ತೆರಿಗೆ ಅಧಿಕಾರಿಗಳು ಪ್ರಕರಣ ದಾಖಲಾಯಿಸಿ ತನಿಖೆ ನಡೆಸುತ್ತಿದ್ದಾರೆ.