ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ಮುಖ್ಯ ಶಿಕ್ಷಕರ ಸಭೆಯನ್ನು ಡಿ. 17 ರಂದು ನಡೆಸಲಾಯಿತು. ವಿದ್ಯಾರ್ಥಿನಿಯರ ಪ್ರಾರ್ಥನಾ ಗೀತೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು.
ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಾ ಕೇಸರಿ ಸಭೆಯಲ್ಲಿ ಚರ್ಚಿಸಲಿರುವ ಮಾಹಿತಿಗಳ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಕ್ಷೇತ್ರ ಸಮನ್ವಯಾಧಿಕಾರಿ ಬಸವಲಿಂಗಪ್ಪ ಇಲಾಖಾ ಮಾಹಿತಿ ನೀಡಿದರು. ಶಿಕ್ಷಣ ಸಮನ್ವಯಾಧಿಕಾರಿ ವಿಲ್ಫ್ರೆಡ್ ಪಿಂಟೋ ಅಲ್ಪಸಂಖ್ಯಾತರ ವಿದ್ಯಾರ್ಥಿವೇತನದ ಕುರಿತು ಮಾಹಿತಿ ನೀಡಿದರು.
ದಯಾ ವಿಶೇಷ ಶಾಲೆಯ ನಿರ್ದೇಶಕ ಫಾ. ವಿನೋದ್ ಮಸ್ಕರೇನಸ್ ಡಿ. 29 ರಂದು ನಡೆಯುವ ದಯಾ ಫಿಯೇಸ್ತಾ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು. ಜ್ಞಾನೇಶ್ ಜಿಲ್ಲಾ ಅಕ್ಷರ ದಾಸೋಹ ಶಿಕ್ಷಣಾಧಿಕಾರಿ ಭಾಗವಹಿಸಿ ಅಕ್ಷರದಾಸೋಹದ ಬಗ್ಗೆ ತಿಳಿಸಿ, ಮಾರ್ಗದರ್ಶನ ನೀಡಿದರು.
ಶಿಕ್ಷಣ ಸಂಯೋಜಕಿ ಚೇತನಾಕ್ಷಿ ಪಠ್ಯಕ್ರಮದ ಕುರಿತು ತಿಳಿಸಿದರು. ಒಟ್ಟಾರೆಯಾಗಿ ಸಭೆಯಲ್ಲಿ ಶೈಕ್ಷಣಿಕ ವಿಚಾರಗಳು, ಆಡಳಿತಾತ್ಮಕ ವಿಚಾರ ಮತ್ತು ಶೈಕ್ಷಣಿಕ ಗುಣಮಟ್ಟದ ಕುರಿತು ಚರ್ಚೆ ನಡೆಸಲಾಯಿತು.
ಸಭೆಯಲ್ಲಿ ಹೋಲಿ ರಿಡೀಮರ್ ಶಾಲಾ ಮುಖ್ಯೋಪಾಧ್ಯಾಯ ವಂ. ಫಾ. ಕ್ಲಿಫರ್ಡ್ ಪಿಂಟೋ, ಪ್ರಾಥಮಿಕ ಮತ್ತು ಪ್ರೌಢ ಮತ್ತು ದೈಹಿಕ ಶಿಕ್ಷಣ ಸಂಘಗಳ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
ಬೆಳ್ತಂಗಡಿ ಸಮೂಹ ಸಂಪನ್ಮೂಲ ವ್ಯಕ್ತಿ ವಾರಿಜ ಸ್ವಾಗತಿಸಿದರು. ಗುರುವಾಯನಕೆರೆ ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ರಾಜೇಶ್ ಕೆ ಕಾರ್ಯಕ್ರಮ ನಿರ್ವಹಿಸಿದರು. ಮುಂಡಾಜೆ ಕ್ಲಸ್ಟರ್ ನ ಸಮೂಹ ಸಂಪನ್ಮೂಲ ವ್ಯಕ್ತಿ ಪ್ರಶಾಂತ್ ವಂದಿಸಿದರು.