ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ಕ್ಷೇತ್ರ ವೇಣೂರು ಬ್ಲಾಕ್ ಸಮಿತಿ ವತಿಯಿಂದ ಅಂಬೇಡ್ಕರ್ ಕುರಿತಾದ ವಿವಾದಾತ್ಮಕ ಹೇಳಿಕೆ ಖಂಡಿಸಿ, ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ಗುರುವಾಯನಕೆರೆ ಜಂಕ್ಷನ್ ಡಿ. 20 ಪ್ರತಿಭಟನೆ ನಡೆಯಿತು.
ಎಸ್. ಡಿ. ಪಿ. ಐ ಬೆಳ್ತಂಗಡಿ ಕ್ಷೇತ್ರಾಧ್ಯಕ್ಷ ಅಕ್ಬರ್ ಬೆಳ್ತಂಗಡಿ, ಜಿಲ್ಲಾ ನಾಯಕ ನವಾಝ್ ಕಟ್ಟೆ ಮುಖ್ಯ ಅತಿಥಿಯಾಗಿ ಪ್ರತಿಭಟನೆಗೆ ಆಗಮಿಸಿದ್ದರು.
ಪ್ರತಿಭಟನಾಕರರನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ನಾಯಕರಾದ ನವಾಝ್ ಕಟ್ಟೆ ಮಾತನಾಡಿ ಕೇಂದ್ರ ಸಚಿವ ಅಮಿತ್ ಷಾ ಸಂಸತ್ತಿನಲ್ಲಿ ಮಾತನಾಡುವಾಗ ಅಂಬೇಡ್ಕರ್ ಬಗ್ಗೆ ವ್ಯಂಗ್ಯದಿಂದ ಮಾತನಾಡಿದ್ದಾರೆ. ಅಂಬೇಡ್ಕರ್ ಹೆಸರು ಹೇಳುವ ಬದಲು ದೇವರ ಹೆಸರನ್ನು ಅಷ್ಟು ಸಲ ಪಠಣ ಮಾಡಿದ್ದರೆ ಸ್ವರ್ಗ ಪ್ರಾಪ್ತಿಯಾಗುತಿತ್ತು ಎಂದು ಹೇಳುವ ಮೂಲಕ ಅಂಬೇಡ್ಕರ್ ಹೆಸರಿಗೆ ಕಳಂಕ ತರುವ ರೀತಿಯಲ್ಲಿ ಮಾತನಾಡಿರುವುದು ಸರಿಯಲ್ಲ ಎಂದರು.
ಈ ಕೂಡಲೇ ರಾಷ್ಟ್ರಪತಿ ಮಧ್ಯಪ್ರವೇಶ ಮಾಡಿ ಅಮಿತ್ ಷಾ ಅಂಬೇಡ್ಕರ್ ಹೆಸರನ್ನು ವ್ಯಂಗ್ಯ ಮಾಡಿ ಹಾಗೂ ಅವಹೇಳನಕಾರಿಯಾಗಿ ಮಾತನಾಡಿರುವುದರಿಂದ ಅವರ ಸಂಸತ್ ಸದಸ್ಯತ್ವವನ್ನು ಅನರ್ಹಗೊಳಿಸಿ ದೇಶದಿಂದ ಗಡಿಪಾರು ಮಾಡಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಎಸ್. ಡಿ. ಪಿ. ಐ ವೇಣೂರು ಬ್ಲಾಕ್ ಸಮಿತಿ ಅಧ್ಯಕ್ಷ ಅಶ್ರಫ್ ಬದ್ಯಾರು, ಕ್ಷೇತ್ರ ಕೋಶಾಧಿಕಾರಿ ಸ್ವಾಲಿ ಮದ್ದಡ್ಕ, ಪಂಚಾಯತ್ ಸದಸ್ಯ ಮುಸ್ತಾಫ ಜಿ. ಕೆರೆ, ನಿಜಾಮ್ ಕಟ್ಟೆ, ಬ್ಲಾಕ್ ಪದಾಧಿಕಾರಿಗಳು, ಬ್ರಾಂಚ್ ನಾಯಕರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.