Site icon Suddi Belthangady

ಸ್ಟಾರ್ ಲೈನ್ ಶಾಲೆಯಲ್ಲಿ ನ್ಯಾಷನಲ್ ಮಾಥ್ಸ್ ಡೇ ಮತ್ತು ವಿಜ್ಞಾನ ವಸ್ತು ಪ್ರದರ್ಶನ


ಮಂಜೊಟ್ಟಿ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ನಲ್ಲಿ ಅಂತಾರಾಷ್ಟ್ರೀಯ ಗಣಿತ ದಿನಾಚರಣೆಯನ್ನು ಬಹಳ ಅರ್ಥಪೂರ್ಣವಾಗಿ ಆಚರಿಸಲಾಯಿತು.

ವಿಶೇಷ ವಿಜ್ಞಾನ ಪ್ರಯೋಗದ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಾರ್ಯಕ್ರಮಕದ ಮುಖ್ಯ ಅತಿಥಿ, ಶಾಲಾ ಆಡಳಿತ ಟ್ರಸ್ಟಿನ ಕಾರ್ಯದರ್ಶಿ ಸಯ್ಯದ್ ಮಹಮ್ಮದ್ ಅಯ್ಯುಬ್ ಮಾತನಾಡಿ “ವಿದ್ಯಾರ್ಥಿಗಳು ತಮ್ಮ ದೈನಂದಿನ ಜೀವನದಲ್ಲಿ ವಿಜ್ಞಾನವನ್ನು ಅಳವಡಿಸಿಕೊಂಡು ಹೊಸ ಆವಿಷ್ಕಾರಗಳನ್ನು ಮಾಡುತ್ತಾ ಭವಿಷ್ಯದಲ್ಲಿ ಉತ್ತಮ ವಿಜ್ಞಾನಿಗಳಾಗಿ ದೇಶ ಸೇವೆಯನ್ನು ಮಾಡಬೇಕು ಮತ್ತು ಅದಕ್ಕೆ ಬೇಕಾದ ಸಂಪೂರ್ಣ ಸಹಕಾರವನ್ನು ನೀಡುವ ಭರವಸೆಯನ್ನು ನೀಡಲಾಗುವುದು” ಎಂದರು.

ಶಾಲಾ ಮುಖ್ಯೋಪಾಧ್ಯಾಯಿನಿ ಜಾಕಿನ್ ಬಿನ್ ರಾಷ್ಟ್ರೀಯ ಗಣಿತ ದಿನಾಚರಣೆಯ ಮಹತ್ವವನ್ನು ವಿಶೇಷ ವಿವರಣೆಯೊಂದಿಗೆ ವಿದ್ಯಾರ್ಥಿಗಳಿಗೆ ತಿಳಿಸಿದರು.

ವಿದ್ಯಾರ್ಥಿಗಳು ತಯಾರಿಸಿದ ಬೇರೆ ಬೇರೆ ವಿಜ್ಞಾನದ ಮಾದರಿಗಳ ವಸ್ತುಪ್ರದರ್ಶನ ಅತಿಥಿಗಳ ಪ್ರಶಂಷೆಗೆ ಕಾರಣವಾಯಿತು.

8 ನೇ ತರಗತಿಯ ವಿದ್ಯಾರ್ಥಿ ಮಹಮ್ಮದ್ ಜಾಫರ್ ಅತಿಥಿಗಳನ್ನು ಸ್ವಾಗತಿಸಿದರು. 10 ನೇ ತರಗತಿಯ ವಿದ್ಯಾರ್ಥಿ ಮುಹಮ್ಮದ್ ಶಿಹಾಬುದ್ದಿನ್ ಕಾರ್ಯಕ್ರಮವನ್ನು ನಿರೂಪಿಸಿದರು. 8 ನೇ ತರಗತಿಯ ವಿದ್ಯಾರ್ಥಿ ಮುನಾವರ್ ಧನ್ಯವಾದ ಕಾರ್ಯಕ್ರಮವನ್ನು ನೆರವೇರಿಸಿಕೊಟ್ಟರು.

Exit mobile version