Site icon Suddi Belthangady

ಉಜಿರೆ: ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ – ಬಹುಮಾನ ವಿತರಣೆ

ಉಜಿರೆ: ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಬಹುಮಾನ ವಿತರಣೆ ಕಾರ್ಯಕ್ರಮ ಡಿ. 20 ರಂದು ನಡೆಯಿತು.

ರಾಜ್ಯೋತ್ಸವ ಪ್ರಶಸ್ತಿ ವಿಜೇತ ‘ಬದುಕು ಕಟ್ಟೋಣ ಬನ್ನಿ’ ತಂಡದ ಸಂಚಾಲಕ, ಉದ್ಯಮಿ ಹಾಗೂ ಶಾಲಾ ಹಳೆ ವಿದ್ಯಾರ್ಥಿ ಕೆ. ಮೋಹನ್ ಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಿ
ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು, ಸತತ ಸೋಲುಗಳಿಂದ ಗೆಲುವು ಖಚಿತ. ಪ್ರಯತ್ನ ಮುಖ್ಯ ಎಂದು ಹೇಳಿದರು.

ಇನ್ನೋರ್ವ ಅತಿಥಿ ವಿಜಯ ಬ್ಯಾಂಕ್ ಪ್ರಬಂಧಕ ವಿನಾಯಕ ಹೆಗ್ಡೆ ಮಾತನಾಡಿ “ಇಂದಿನ ಸ್ಪರ್ಧಾಯುಗದಲ್ಲಿ ಪ್ರಯತ್ನ ಮತ್ತು ಪರಿಶ್ರಮ ಅಗತ್ಯ” ಎಂದರು. ರತ್ನಮಾನಸದ ನಿಲಯಪಾಲಕ ಯತೀಶ ಬಳಂಜ ಶುಭ ಹಾರೈಸಿದರು.

ಮುಖ್ಯೋಪಾಧ್ಯಾಯ ಸುರೇಶ್ ಕೆ. ಅಧ್ಯಕ್ಷತೆ ವಹಿಸಿದ್ದರು. ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ನೀಡಲಾಯಿತು. ಶಿಕ್ಷಕರಾದ ರಾಧಾಕೃಷ್ಣ ಮತ್ತು ತ್ರಿವೇಣಿ ಅತಿಥಿಗಳನ್ನು ಪರಿಚಯಿಸಿದರು. ಸಂಗೀತ ಸ್ವಾಗತಿಸಿದರು. ಜ್ಞಾನೇಶ್ ಕಾರ್ಯಕ್ರಮ ನಿರೂಪಿಸಿದರು. ಚಂದ್ರಶೇಖರ್ ವಂದಿಸಿದರು.

Exit mobile version