ಬೆಳ್ತಂಗಡಿ: ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ರವರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ಡಿ. 23 ರಂದು ತಾಲೂಕು ಕಚೇರಿ ಮುಂಭಾಗ ನಡೆಯಿತು.
ಈ ಸಂಧರ್ಭದಲ್ಲಿ ಕೆ. ಪಿ. ಸಿ. ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಶೇಖರ್ ಕುಕ್ಕೇಡಿ, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಶಾಹುಲ್ ಹಮೀದ್, ಲೋಕೇಶ್ವರಿ ವಿನಯ್ ಚಂದ್ರ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ನಾಗೇಶ್ ಕುಮಾರ್, ಪ್ರವೀಣ್ ಫೆರ್ನಾಂಡಿಸ್, ಜಯವಿಕ್ರಮ್ ಕಲ್ಲಾಪು, ಈಶ್ವರ ಭಟ್, ಕೇಶವ ಗೌಡ ಬೆಳಾಲು, ಮಹಿಳಾ ನಗರ ಕಾಂಗ್ರೆಸ್ ಅಧ್ಯಕ್ಷೆ ವಂದನಾ ಭಂಡಾರಿ, ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷೆ ನಮಿತಾ ಕೆ.ಪೂಜಾರಿ, ಪದ್ಮನಾಭ ಸಲ್ಯಾನ್, ಬೆಳ್ತಂಗಡಿ ನಗರ ಪಂಚಾಯತ್ ಸದಸ್ಯ ಜಗದೀಶ್ ಡಿ., ಇಸುಬು ಇಳಂತಿಲ ಮೊದಲಾದವರು ಉಪಸ್ಥಿತರಿದ್ದರು.