p>
ಧರ್ಮಸ್ಥಳ: ಪೊದಿಂಬಿಲ ನಿವಾಸಿ ರಾಜೇಶ್ ಆಚಾರ್ಯ (36 ವ) ಇವರು ಡಿ.23 ರಂದು ಮಾಲ್ಯಳ ಕಾಡಿಗೆ ಮಕ್ಕಳಿಗೆ ಮದ್ದಿನ ಸೊಪ್ಪು ತರಲು ಹೋದ ವ್ಯಕ್ತಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸಾವನಪ್ಪಿದ ಘಟನೆ ನಡೆದಿದೆ.
ಮನೆಯಿಂದ ಹೋದವರು ಮನೆಗೆ ವಾಪಸ್ಸಾಗದೆ ಇದ್ದಾಗ ಮನೆಯವರು ಮತ್ತು ಸಾರ್ವಜನಿಕರು ಹುಡುಕಾಟದಲ್ಲಿ ತೊಡಗಿದರು. ಸ್ವಲ್ಪ ಸಮಯದ ನಂತರ ಕಲ್ಲಿನ ಸೆರೆಯಲ್ಲಿ ಸಿಲುಕಿದ ರೀತಿಯಲ್ಲಿ ಮೃತದೇಹ ಪತ್ತೆಯಾಗಿದೆ
ಮೃತರು ತಂದೆ ಆನಂದ ಆಚಾರ್ಯ ಇವರನ್ನು ಅಗಲಿದ್ದಾರೆ. ಮೃತರು ಬೆಳ್ತಂಗಡಿಯ ಸಂತೆಕಟ್ಟೆಯಲ್ಲಿ ಬೆಳ್ಳಿಯ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು.
ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೋಲಿಸರು ಭೇಟಿ ನೀಡಿ ಪರಿಚಲನೆ ನಡೆಸಿದ್ದಾರೆ.
p>