Site icon Suddi Belthangady

ದಿನೇಶ್ ಪೂಜಾರಿ ಉಪ್ಪಾರು ಸ್ಮರಣಾರ್ಥ ನಿರ್ಮಾಣಗೊಂಡ ಅನಂತೋಡಿ ವೃತ್ತ ಉದ್ಘಾಟನೆ

ಬೆಳಾಲು: ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ ಮತ್ತು ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ಇವರ ಕೊಡುಗೆಯಾಗಿ ದಿ. ದಿನೇಶ್ ಪೂಜಾರಿ ಉಪ್ಪಾರು ಇವರ ಸ್ಮರಣಾರ್ಥವಾಗಿ ನಿರ್ಮಾಣ ಮಾಡಿದ ಅನಂತೋಡಿ ವೃತ್ತವನ್ನು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಉಪಾಧ್ಯಕ್ಷೆ ಮಮತಾ ದಿನೇಶ್ ಪೂಜಾರಿ ಉಪ್ಪಾರು ಲೋಕಾರ್ಪಣೆಗೊಳಿಸಿದರು.

ಈ ಸಂದರ್ಭದಲ್ಲಿ ಆರಿಕೋಡಿ ಶ್ರೀ ಚಾಮುಂಡೆಶ್ವರಿ ಕ್ಷೇತ್ರದಿಂದ ಕೊಡುಗೆಯಾಗಿ ನೀಡಿದ ಶುದ್ಧ ಕುಡಿಯುವ ನೀರಿನ ಯಂತ್ರವನ್ನು ಚಾಮುಂಡೆಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿ ಉದ್ಘಾಟಿಸಿದರು. ವೇದಿಕೆಯಲ್ಲಿ ಬೆಳ್ತಂಗಡಿ ಇಲಾಖಾ ಗುತ್ತಿಗೆ ಇಂಜಿನಿಯರ್ ಹರೀಶ್ ಕಾರಿಂಜ, ದೇವಸ್ಥಾನದ ಆಸ್ರಣ್ಣ ಗಿರೀಶ್ ಬಾರಿತ್ತಾಯ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀನಿವಾಸ್ ಗೌಡ, ಪ್ರಧಾನ ಕಾರ್ಯದರ್ಶಿ ದುರ್ಗಾಪ್ರಸಾದ್ ಕೆರ್ಮುನ್ನಾಯ, ಮಹಿಳಾ ಸಮಿತಿಯ ಗೌರವಾಧ್ಯಕ್ಷೆ ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ, ಮಹಿಳಾ ಸಮಿತಿಯ ಅಧ್ಯಕ್ಷೆ ಹೇಮಲತಾ ಶ್ರೀನಿವಾಸ್ ಗೌಡ, ಅನಂತೇಶ್ವರ ಫ್ರೆಂಡ್ಸ್ ಅಧ್ಯಕ್ಷ ವಿಶ್ವನಾಥ ಪೂಜಾರಿ ಬಾಯ್ತರಡ್ಡ ಉಪಸ್ಥಿತರಿದ್ದರು.

ಗಿರೀಶ್ ಎಂ. ಕಾರ್ಯಕ್ರಮ ನಿರೂಪಣೆಯೊಂದಿಗೆ ಸ್ವಾಗತಿಸಿದರು. ಸತೀಶ್ ಗೌಡ ಎಳ್ಳುಗದ್ದೆ ವಂದಿಸಿದರು.

Exit mobile version