Site icon Suddi Belthangady

ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ – ದರ್ಶನ ಬಲಿ

ಬೆಳಾಲು: ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಪರಿವಾರ ದೈವಗಳ ನರ್ತನ ಸೇವೆ ಡಿ. 24 ಮತ್ತು 25 ರಂದು ವೇದಮೂರ್ತಿ ನೀಲೇಶ್ವರ ಆಲಂಬಾಡಿ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.

ಡಿ. 24 ರಂದು ಬೆಳಿಗ್ಗೆ ತಂತ್ರಿಗಳ ಸ್ವಾಗತ, ದೇವತಾ ಪ್ರಾರ್ಥನೆ, ಗಣಹೋಮ, ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಬೆಳಾಲು ಪೇಟೆಯಿಂದ ಭವ್ಯ ಮೆರವಣಿಗೆಯೊಂದಿಗೆ ಊರ ಭಕ್ತರು ಹಸಿರುವಾಣಿ ಸಮರ್ಪಣೆ ಮಾಡಿದರು.

ಬಳಿಕ ಅನಂತ ಪದ್ಮನಾಭ ಮಹಿಳಾ ಕುಣಿತಾ ಭಜನಾ ತಂಡ ಮತ್ತು ಶ್ರೀ ಅನಂತೇಶ್ವರ ಭಜನಾ ಮಂಡಳಿಯಿಂದ ಭಜನೆ, ದೇವರಿಗೆ ಪಂಚಾಮೃತ ಅಭಿಷೇಕ, ಪವಮಾನ ಕಲಶಾಭಿಷೇಕ, ಪ್ರಸನ್ನ ಪೂಜೆ, ಶ್ರೀ ನಾಗ ದೇವರಿಗೆ ಕಲಶಾಭಿಷೇಕ, ತನು ಸಮರ್ಪಣೆ, ಪರಿವಾರ ದೈವಗಳಿಗೆ ಕಲಶಾಭಿಷೇಕ, ಪರ್ವ ತಂಬಿಲ ಮಧ್ಯಾಹ್ನ ಮಹಾಪೂಜೆ, ಅನ್ನ ಸಂತರ್ಪಣೆ, ಊರವರಿಂದ ಒಂದು ಮಂಡಲ ಶ್ರೀ ಮಹಾ ವಿಷ್ಣುಯಾಗ, ವಿಷ್ಣು ಸಹಸ್ರ ನಾಮ ಪಾರಾಯಣ ನಡೆಯಿತು.

ರಾತ್ರಿ ಪೂಜೆ ಹಾಗೂ ಶ್ರೀ ದೇವರಿಗೆ ರಂಗ ಪೂಜೆ, ದೇವರ ಬಲಿ ಹೊರಟು ಭೂತಬಲಿ ಉತ್ಸವ, ವಸಂತಕಟ್ಟೆ ಪೂಜೆ, ಮಹಾಪೂಜೆ, ರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಪಿಂಗಾರ ಕಲಾವಿದೆರ್ ಬೆದ್ರ ಇವರಿಂದ ಕದಂಬ ತುಳು ನಾಟಕ ಪ್ರದರ್ಶನಗೊಂಡಿತು.

ಡಿ. 25 ರಂದು ಬೆಳಿಗ್ಗೆ ಗಣಪತಿ ಹೋಮ, ದೇವರ ಬಲಿ ಹೊರಟು ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ ನಡೆಯಿತು.

Exit mobile version