Site icon Suddi Belthangady

ನಿಷೇಧಿತ ಮಾದಕ ವಸ್ತು ಮಾರಾಟ – ಮೊಹಮ್ಮದ್ ರಫೀಕ್ ಬಂಧನ

ಕಾರ್ಕಳ: ಮೂಡುಬಿದಿರೆಯ ಮೂಡುಕೊಣಾಜೆ ಗ್ರಾಮದ ಕೈಕಂಜಿ ಪಡ್ಡು ಸೇತುವೆ ಬಳಿ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಮಾರಾಟಕ್ಕೆ ಮುಂದಾದ ವ್ಯಕ್ತಿಯೊಬ್ಬನನ್ನು ಪೊಲೀಸ್ ವೃತ್ತ ನಿರೀಕ್ಷಕ ಸಂದೇಶ್ ಪಿ. ಜಿ. ನೇತೃತ್ವದ ಪೊಲೀಸರ ತಂಡ ಬಂಧಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಮದಡ್ಕ ಚಿಲಿಂಬಿ ನಿವಾಸಿ ಮೊಹಮ್ಮದ್ ರಫೀಕ್( 38 ) ಪ್ರಕರಣದ ಆರೋಪಿ.
ಗಾಂಜಾ ವ್ಯಸನಿಗಳಿಗೆ ಗಾಂಜಾ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಆರೋಪಿ ರಫೀಕ್ ನನ್ನು ವಶಕ್ಕೆ ಪಡೆದು ಪತ್ರಾಂಕಿತ ಅಧಿಕಾರಿಯವರು ಅಂಗ ಶೋಧನೆ ನಡೆಸಿದಾಗ ಆತನ ವಶದಲ್ಲಿದ್ದ ಒಟ್ಟು 900 ಗ್ರಾಂ ತೂಕದ ಗಾಂಜಾವನ ಸ್ವಾಧೀನಪಡಿಸಿಕೊಂಡಿದ್ದಾರೆ.

Exit mobile version