ಧರ್ಮಸ್ಥಳ: ಜೋಡುಸ್ಥಾನದ ನಿವಾಸಿ ನಿರೀಕ್ಷಾ ಮಣಿಪಾಲ್ ಕಾಲೇಜ್ ಆಫ್ ಹೆಲ್ತ್ ಪ್ರೊಫೆಷನ್ಸ್‌ನಲ್ಲಿ ಎಂ.ಎಸ್ಸಿ. ಅರಿವಳಿಕೆ ಮತ್ತು ಆಪರೇಷನ್ ಥಿಯೇಟರ್ ತಂತ್ರಜ್ಞಾನ ವಿಭಾಗದಲ್ಲಿ ಪ್ರಥಮ ವರ್ಷ ಮತ್ತು ದ್ವಿತೀಯ ವರ್ಷದಲ್ಲಿ ಪ್ರಥಮ ರ್‍ಯಾಂಕ್ ಪಡೆದಿದ್ದಾರೆ.
ತಮ್ಮ ಸಾಧನೆಗಾಗಿ “ಬೆಸ್ಟ್ ಔಟ್‌ಗೋಯಿಂಗ್ ಸ್ಟೂಡೆಂಟ್” ಪ್ರಶಸ್ತಿ ಹಾಗೂ ಚಿನ್ನದ ಪದಕವನ್ನು ಗಳಿಸಿದ್ದಾರೆ. ಇವರು ಧರ್ಮಸ್ಥಳ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಅರುಣ್ ಕುಮಾರ್ ಹಾಗೂ ಮಮತಾ ಅರುಣ್ ರವರ ಪುತ್ರಿಯಾಗಿದ್ದಾರೆ. ಎಸ್ ಡಿ ಎಂ ಉಜಿರೆ ಕಾಲೇಜಿನ ಹಳೇ ವಿದ್ಯಾರ್ಥಿನಿಯಾಗಿದ್ದಾರೆ.