ಮೂಡುಬಿದಿರೆಯ ಎಕ್ಸಲೆಂಟ್ ಶಿಕ್ಷಣ ಸಂಸ್ಥೆ – ಬಾಲಕನ ಚಿಕಿತ್ಸೆಗೆ ನೆರವು

0

p>


ಬೆಳ್ತಂಗಡಿ: ತೀವ್ರತರವಾದ ಆರೋಗ್ಯ ಸಮಸ್ಯೆಗೆ ಸಂಬಂಧಿಸಿದಂತೆ ಮಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ವಿಭಾಗಕ್ಕೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಸೃಜನ್ ಕುಕ್ಯಾನ್ ನ ವೈದ್ಯಕೀಯ ಚಿಕಿತ್ಸೆಗೆ ಆರ್ಥಿಕವಾಗಿ ಬೆಂಬಲವನ್ನು ನೀಡಿದ ಮೂಡುಬಿದಿರೆಯ ಎಕ್ಸಲೆಂಟ್ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಯ ಬದುಕಿಗೆ ಆರ್ಥಿಕ ನೆರವನ್ನು ನೀಡಲಾಯಿತು.

ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆ ಮೂಡುಬಿದಿರೆಯ 9 ನೇ ತರಗತಿಯ ವಿದ್ಯಾರ್ಥಿಯಾಗಿರುವ ಸೃಜನ್ ಕುಕ್ಯಾನ್ ಕಳೆದ ಕೆಲ ದಿನಗಳಿಂದ ತೀವ್ರತರವಾದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದು ತುರ್ತು ಚಿಕಿತ್ಸಾ ವಿಭಾಗಕ್ಕೆ ದಾಖಲಾಗಿದ್ದ.

ಹೆಚ್ಚಿನ ಚಿಕಿತ್ಸೆಯ ವೆಚ್ಚವನ್ನು ಭರಿಸಲು ಮಧ್ಯಮ ವರ್ಗದ ಬಾಲಕನ ಕುಟುಂಬ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದು ಈ ಹಿನ್ನಲೆಯಲ್ಲಿ ಆತನ ಕುಟುಂಬದ ಸದಸ್ಯರು ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಗೂ ಮನವಿ ಸಲ್ಲಿಸಿದ್ದರು.

ಈ ಮನವಿಗೆ ಕೂಡಲೇ ಸ್ಪಂದಿಸಿದ ಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್ ಹಾಗೂ ಕಾರ್ಯದರ್ಶಿ ರಶ್ಮಿತಾ ಜೈನ್‌ ಆರ್ಥಿಕ ಬೆಂಬಲವನ್ನು ನೀಡುವುದರ ಜೊತೆಗೆ ಸಂಸ್ಥೆಯ ಅಧ್ಯಾಪಕ ವೃಂದ ಹಾಗೂ ವಿದ್ಯಾರ್ಥಿಗಳ ಸಹಕಾರದೊಂದಿಗೆ 5 ಲಕ್ಷ ರೂ. ಗಳ ಮೊತ್ತವನ್ನು ಬಾಲಕನ ಕುಟುಂಬಕ್ಕೆ ಕ್ರಿಸ್‌ಮಸ್ ಡೇ ಕಾರ್ಯಕ್ರಮದ ಸಂದರ್ಭದಲ್ಲಿ ನೀಡುವ ಮೂಲಕ ಆತನ ಚಿಕಿತ್ಸೆಗೆ ನೆರವಾಗಿದ್ದಾರೆ.

ಈ ಮಹಾ ಕಾರ್ಯಕ್ಕೆ ಸಂಸ್ಥೆಯ ಅಧ್ಯಕ್ಷರು, ಕಾರ್ಯದರ್ಶಿಗಳು, ಅಧ್ಯಾಪಕ ವೃಂದ, ವಿದ್ಯಾರ್ಥಿಗಳು ಹಾಗೂ ಕೆಲವು ಪೋಷಕರು ಸಹಾಯಧನವನ್ನು ನೀಡಿದ್ದು ಎಲ್ಲೆಡೆ ಪ್ರಶಂಸೆಗೆ ಕಾರಣವಾಗಿದೆ. ಈ ಹಿಂದೆಯೂ ಕೂಡ ಎಕ್ಸಲೆಂಟ್ ಶಿಕ್ಷಣ ಸಂಸ್ಥೆ, ಇಬ್ಬರೂ ವಿದ್ಯಾರ್ಥಿನಿಯರ ಚಿಕಿತ್ಸೆಗೆ ಸಂಬಂಧಿಸಿದಂತೆ ಆರ್ಥಿಕ ಸಹಾಯ ಹಸ್ತವನ್ನು ನೀಡಿತ್ತು.

LEAVE A REPLY

Please enter your comment!
Please enter your name here