Site icon Suddi Belthangady

ಬಳಂಜ: ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯಿಂದ ಡಾ. ಮನಮೋಹನ್ ಸಿಂಗ್ ರವರಿಗೆ ಶ್ರದ್ಧಾಂಜಲಿ ಸಭೆ

ಬಳಂಜ: ವಿಧಿವಶರಾದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ರವರಿಗೆ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರು ಒಟ್ಟು ಸೇರಿ ಶ್ರದ್ಧಾಂಜಲಿ ಅರ್ಪಿಸಿದರು.

ಬಳಂಜ ಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ನಡೆದ ಸಭೆಯಲ್ಲಿ ಮಂಡಳಿಯ ಪ್ರಧಾನ ಸಂಚಾಲಕ ಹರೀಶ್ ವೈ ಚಂದ್ರಮ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ. ಮನಮೋಹನ್ ಸಿಂಗ್ ರವರ ಅಧಿಕಾರವಧಿಯಲ್ಲಿ ಬಡತನ ನಿರ್ಮೂಲನೆಗಾಗಿ ನಡೆಸಿದ ಹಲವು ಜನಪರ ಕೆಲಸಗಳನ್ನು ನೆನಪಿಸಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು.

ಮಂಡಳಿಯ ಅಧ್ಯಕ್ಷೆ ಜ್ಯೋತಿ ಸೇರಿದಂತೆ ಮಂಡಳಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Exit mobile version