ಕಣ್ಣಿನ ಉಚಿತ ತಪಾಸಣಾ ಶಿಬಿರ

0

p>

ಕನ್ಯಾಡಿ 2: ಡಿ. 28 ರಂದು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ಹಳೆ ವಿದ್ಯಾರ್ಥಿಗಳ ಸಂಘ ಮತ್ತು ಪೋಷಕರ ಸಹಭಾಗಿತ್ವದಲ್ಲಿ ” ಕಣ್ಣಿನ ಉಚಿತ ತಪಾಸಣಾ ಶಿಬಿರ ” ದೀಪ ಬೆಳಗಿಸುವ ಮೂಲಕ ಉದ್ಘಾಟನೆಗೊಂಡಿತು.

ಈ ತಪಾಸಣಾ ಕಾರ್ಯವು 2.5 NVG Eye Mithra ಸುರತ್ಕಲ್ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಇವರ ಜಂಟಿ ಆಶ್ರಯದಲ್ಲಿ ನಡೆಯಿತು.

ಈ ತಂಡದಲ್ಲಿದ್ದ ರಾಮಚಂದ್ರ ಕಣ್ಣಿನ ದೋಷ, ಯಾವ ರೀತಿಯಾದ ಆಹಾರ ಸೇವನೆ ಕಣ್ಣಿಗೆ ಉತ್ತಮ, ಅತಿಯಾದ ಮೊಬೈಲ್ ಬಳಕೆಯಿಂದ ಕಣ್ಣಿನ ಮೇಲಾಗುವ ದುಷ್ಪರಿಣಾಮ ಮತ್ತು ನೇತ್ರದಾನದ ಬಗ್ಗೆ ಅರಿವನ್ನು ಮೂಡಿಸಿದರು.

ಶಾಲೆಯ ಎಲ್ಲಾ ವಿದ್ಯಾರ್ಥಿಗಳು, ಪೋಷಕರು ಮತ್ತು ಗ್ರಾಮಸ್ಥರು ಕಣ್ಣಿನ ತಪಾಸಣೆಯ ಪ್ರಯೋಜನವನ್ನು ಪಡೆದುಕೊಂಡರು. ಈ ಕಾರ್ಯಕ್ರಮದಲ್ಲಿ ಎಸ್. ಡಿ. ಎಂ. ಸಿ ಅಧ್ಯಕ್ಷ ನಂದ ಕೆ., ಮುಖ್ಯ ಶಿಕ್ಷಕಿ ಪುಷ್ಪಾ ಎನ್., ಶಾಲಾ ಶಿಕ್ಷಕ ವೃಂದದವರು, ಪೋಷಕರು, ಗ್ರಾಮಸ್ಥರು ಮತ್ತು ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here