ಬೆಳ್ತಂಗಡಿ: ಹಿರಿಯ ಪ್ರತಿಷ್ಠಿತ ಸಮಾಜ ಸೇವಾ ಸಂಘಟನೆ ದಕ್ಷಿಣ ಕನ್ನಡ ಜಿಲ್ಲಾ ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದ ಅಧ್ಯಕ್ಷರಾಗಿ ಪುಂಜಾಲಕಟ್ಟೆಯ ದಯಾನಂದ ನಾಯಕ್, ಪ್ರಧಾನ ಕಾರ್ಯದರ್ಶಿಯಾಗಿ ಸುಧಾಕರ್ ಪ್ರಭು ಪೆರ್ಮರೋಡಿ ಆಯ್ಕೆಯಾದರು.
ಬಂಟ್ವಾಳ, ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಸಭಾಭವನದಲ್ಲಿ ಸಂಘದ ಅಧ್ಯಕ್ಷ ಕೂಡಿಬೈಲು ಶ್ರೀನಿವಾಸ ಶೆಣೈಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಆಯ್ಕೆ ಮಾಡಲಾಯಿತು. ದಯಾನಂದ ನಾಯಕ್, ಇವರು ಅನೇಕ ವರ್ಷಗಳಿಂದ ಹಲವು ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ, ಆರೋಗ್ಯ ಮುಂತಾದ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿದ್ದು, ಬೆಳ್ತಂಗಡಿ ತಾಲೂಕು ಸಂಘದ ಹಾಗೂ ಶ್ರೀ ಪೂರ್ಣಾನಂದ ಸೇವಾ ಪ್ರತಿಷ್ಠಾನದ ಅಧ್ಯಕ್ಷರಾಗಿ, ಜಿಲ್ಲಾ ಸಂಘದ ಸದಸ್ಯರಾಗಿ, ಪದಾಧಿಕಾರಿಯಾಗಿ, ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿರುತ್ತಾರೆ.
ಸಾರ್ವಜನಿಕ ಕ್ಷೇತ್ರದಲ್ಲಿ ಹಲವಾರು ಸಂಘಟನೆಗಳಲ್ಲಿ ಸೇವೆ ಸಲ್ಲಿಸುತ್ತಾ ಅಂತಾರಾಷ್ಟ್ರೀಯ ಸಂಸ್ಥೆ ಬೆಳ್ತಂಗಡಿ ಜೂನಿಯರ್ ಚೇಂಬರ್ ನ ಕಾರ್ಯದರ್ಶಿ, ಪದಾಧಿಕಾರಿಯಾಗಿ, ಬೆಳ್ಳಿ ಹಬ್ಬದ ವರ್ಷದ ಅಧ್ಯಕ್ಷರಾಗಿ, ವಲಯ ನಿರ್ದೇಶಕರಾಗಿ, ವಲಯ ಉಪಾಧ್ಯಕ್ಷರಾಗಿ ಹಾಗೂ ರೋಟರಿ ಕ್ಲಬ್ ಬೆಳ್ತಂಗಡಿಯ ಕಾರ್ಯದರ್ಶಿಯಾಗಿ, ಅಧ್ಯಕ್ಷರಾಗಿ ಹಲವಾರು ಸಂಘಟನೆಗಳಲ್ಲೂ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ಆಯ್ಕೆಯಾದ ಸುಧಾಕರ್ ಪ್ರಭು ಪೆರ್ಮರೋಡಿ ಕೃತಜ್ಞತೆ ಸಲ್ಲಿಸಿದರು.