ಬೆಳ್ತಂಗಡಿ: ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಟ್ರಸ್ಟ್ (ರಿ.) ಸಾವ್ಯ ಗುಜ್ಜೊಟ್ಟು ಇಲ್ಲಿ ಜ. 01 ರಂದು 34 ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿಯ ಮಹಾದೀಪೋತ್ಸವ ನಡೆಯಲಿದೆ.
ಬೆಳಗ್ಗೆ 7:30 ರಿಂದ ಗಣಹೋಮ, ಅಶ್ವತ್ಥ ಪೂಜೆ, ಭಜನಾ ಕಾರ್ಯಕ್ರಮ ನಡೆದು, ಮಧ್ಯಾಹ್ನ 12:30 ಕ್ಕೆ ಮಹಾಪೂಜೆ ನೆರವೇರಲಿದೆ. ಬಳಿಕ ಪ್ರಸಾದ ವಿತರಣೆಯಾಗಿ ಸಾರ್ವಜನಿಕ ಅನ್ನಸಂತಪರ್ಣಣೆ ನಡೆಯಲಿದೆ.
ಸಂಜೆ 6 ಗಂಟೆಯಿಂದ ಭಜನೆ, ರಾತ್ರಿ 8:30 ಕ್ಕೆ ಮಹಾಪೂಜೆ ನೆರವೇರಿ, ರಾತ್ರಿ 9:30 ರಿಂದ ಶ್ರೀ ಭಗವತಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ, ಸಸಿಹಿತ್ಲು ಇವರಿಂದ “ನಾಗತಂಬಿ” ಯಕ್ಷಗಾನ ಪ್ರದರ್ಶನಗೊಳ್ಳಲಿದೆ.