ಮರೋಡಿ: ಜ. 4 ರಂದು ಯಂಗ್‌ ಸ್ಟಾರ್‌ ಫ್ರೆಂಡ್ಸ್‌ನ ದಶಮಾನೋತ್ಸವ – ಶನೀಶ್ವರ ಪೂಜೆ

0

p>

ಮರೋಡಿ: ಶ್ರೀ ಉಮಾಮಹೇಶ್ವರ ಯಂಗ್‌ ಸ್ಟಾರ್‌ ಫ್ರೆಂಡ್ಸ್‌ ಮರೋಡಿ ಇದರ ದಶಮಾನೋತ್ಸವ ಪ್ರಯುಕ್ತ ಸಾರ್ವಜನಿಕ ಶನೀಶ್ವರ ಪೂಜೆ ಮತ್ತು ವಾರ್ಷಿಕೋತ್ಸವ ಸಮಾರಂಭ ಜ. 4 ರಂದು ಸಂಜೆ 4 ರಿಂದ ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆಯಲಿದೆ.

ರಾತ್ರಿ 8.30ಕ್ಕೆ ನಡೆಯುವ ಧಾರ್ಮಿಕ ಸಭೆಯನ್ನು ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ದೇವೇಂದ್ರ ಹೆಗ್ಡೆ ಕೊಕ್ರಾಡಿ ಉದ್ಘಾಟಿಸುವರು. ಉಜಿರೆ ಎಸ್‌. ಡಿ. ಎಂ ಕಾಲೇಜಿನ ಉಪನ್ಯಾಸಕ ಮಹಾವೀರ್‌ ಜೈನ್‌ ಇಚ್ಲಂಪಾಡಿ ಧಾರ್ಮಿಕ ಉಪನ್ಯಾಸ ನೀಡುವರು. ಶ್ರೀ ಉಮಾಮಹೇಶ್ವರ ಯಂಗ್‌ ಸ್ಟಾರ್‌ ಫ್ರೆಂಡ್ಸ್‌ ಗೌರವಾಧ್ಯಕ್ಷ ಯಶೋಧರ ಬಂಗೇರ ಅಧ್ಯಕ್ಷತೆ ವಹಿಸುವರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಂಸದ ಬ್ರಿಜೇಶ್‌ ಚೌಟ, ಶಾಸಕ ಹರೀಶ್‌ ಪೂಂಜ, ಮರೋಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರತ್ನಾಕರ ಬುಣ್ಣಾನ್‌, ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಕಾರ್ಯದರ್ಶಿ ಜಯಂತ ಕೋಟ್ಯಾನ್‌, ಪ್ರಗತಿಪರ ಕೃಷಿಕ ವಿಜಯ ಆರಿಗ ನಿಡ್ಡಾಜೆ, ಎಚ್‌. ಡಿ. ಎಫ್‌. ಸಿ ಬ್ಯಾಂಕ್‌ನ ಉಡುಪಿ ಜಿಲ್ಲಾ ಮುಖ್ಯಸ್ಥರು ರವೀಂದ್ರ ಅಂಚನ್‌, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಂಬಳ ಕೋಣಗಳ ಯಜಮಾನ ಇರುವೈಲು ಪಾಣಿಲ ಸತೀಶ್ಚಂದ್ರ ಸಾಲ್ಯಾನ್‌, ಮುಂಬೈ ಭಾರತ್‌ ಬ್ಯಾಂಕ್‌ ನಿರ್ದೇಶಕ, ಉದ್ಯಮಿ ನಾರಾಯಣ ಸುವರ್ಣ ಕನರೊಟ್ಟು, ಪ್ರಗತಿಪರ ಕೃಷಿಕ ಶ್ರೀಧರ ಪೂಜಾರಿ ಭೂತಡ್ಕ ಭಾಗವಹಿಸಲಿದ್ದಾರೆ.

ಸಂಜೆ 4 ಕ್ಕೆ ಕಲಶ ಪ್ರತಿಷ್ಠೆ, ಶ್ರೀ ಶನೀಶ್ವರ ಪೂಜೆ ಆರಂಭ, 6.30 ಕ್ಕೆ ಶ್ರೀ ಉಮಾಮಹೇಶ್ವರ ದೇವರಿಗೆ ಶ್ರೀರಂಗಪೂಜೆ, 7.30 ಕ್ಕೆ ಸ್ಥಳೀಯ ಮಕ್ಕಳಿಂದ ಸಾಂಸ್ಕೃತಿಕ ವೈವಿಧ್ಯ, ರಾತ್ರಿ 9 ಕ್ಕೆ ಸಾರ್ವಜನಿಕ ಅನ್ನಸಂತರ್ಪಣೆ, ಪ್ರಸಾದ ವಿತರಣೆ, 9.30 ಕ್ಕೆ ನಮ್ಮ ಕಲಾವಿದೆರ್ ಬೆದ್ರ ಇವರಿಂದ ಆತೆ ಪನೊಡಾತೆ ತುಳು ನಾಟಕ ಪ್ರದರ್ಶನಗೊಳ್ಳಲಿದೆ. ಈ ಕಾರ್ಯಕ್ರಮ ಸುದ್ದಿ ನ್ಯೂಸ್ ಚಾನೆಲ್ ನಲ್ಲಿ ನೇರ ಪ್ರಸಾರಗೊಳ್ಳಲಿದೆ.

LEAVE A REPLY

Please enter your comment!
Please enter your name here