ಅರಸಿನಮಕ್ಕಿ: ಬಂಟರ ಯಾನೆ ನಾಡವರ ಸಂಘದ ವಾರ್ಷಿಕ ಮಹಾಸಭೆ ಡಿ. 29 ರಂದು ಅರಸಿನಮಕ್ಕಿ ಬಂಟರ ಚಾವಡಿಯಲ್ಲಿ ನಡೆಯಿತು. ಜಯರಾಮ ಶೆಟ್ಟಿ ಪಲಸ್ತಡ್ಕ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷ ಜಯಂತ ಶೆಟ್ಟಿ ಭಂಡಾರಿಗುಡ್ಡೆ, ಪುತ್ತೂರು ಬಂಟರ ಸಂಘದ ಕಾರ್ಯದರ್ಶಿ ನಿತ್ಯಾನಂದ ಶೆಟ್ಟಿ ಮನವಳಿಕೆ ಗುತ್ತು, ಉದ್ಯಮಿ ಚಂದ್ರಹಾಸ ಶೆಟ್ಟಿ, ಬೆಳ್ತಂಗಡಿ ಬಂಟರ ಸಂಘದ ಮಹಿಳಾ ಅಧ್ಯಕ್ಷೆ ಜಯಲಕ್ಷ್ಮೀ ಎನ್. ಸಾಮಾನಿ, ಬೆಳ್ತಂಗಡಿ ಸ್ಪಂದನಾ ಬಂಟರ ಸೇವಾ ತಂಡದ ಅಧ್ಯಕ್ಷ ಸುರೇಶ್ ಶೆಟ್ಟಿ ಲಾಯಿಲ, ಬೆಳ್ತಂಗಡಿ ಯುವ ವಿಭಾಗದ ಅಧ್ಯಕ್ಷ ಪ್ರತೀಕ್ ಶೆಟ್ಟಿ ನೊಚ್ಚ, ನಾಟಿ ವೈದ್ಯ ರಮಾನಾಥ ರೈ ಉಪಸ್ಥಿತರಿದ್ದರು.
ಭಜನಾ ಸಂಘಟನೆಯಲ್ಲಿ ಜಿಲ್ಲಾ ಪ್ರಶಸ್ತಿ ಪುರಸ್ಕೃತ ಬಾಲಕೃಷ್ಣ ರೈ ತುಂಬೆಕೋಡಿ, ಜಯರಾಮ ಶೆಟ್ಟಿ ಫಲಸ್ತಡ್ಕ ಇವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಸುರೇಶ್ ಶೆಟ್ಟಿ ಸ್ವಾಗತಿಸಿ, ವಿಧ್ಯಾಭಾಸ್ಕರ ಶೆಟ್ಟಿ ವರದಿ ಮಂಡಿಸಿದರು. ರಂಜಿತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ರಾಜೇಶ್ ಶೆಟ್ಟಿ ಧನ್ಯವಾದವಿತ್ತರು.