p>
ಕೊಕ್ಕಡ: ಧರ್ಮಸ್ಥಳ ಠಾಣಾ ವ್ಯಾಪ್ತಿಯ ಕೊಕ್ಕಡ ಗ್ರಾಮದಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಧರ್ಮಸ್ಥಳ ಪೊಲೀಸ್ ಠಾಣಾ ಅ ಕ್ರ 72/2024 ಕಲಂ:305 ಬಿ. ಎನ್. ಎಸ್ ರಂತೆ ದಾಖಲಾಗಿದ್ದು, ಸದ್ರಿ ಪ್ರಕರಣದಲ್ಲಿ ಬೆಳ್ತಂಗಡಿ ಗ್ರಾಮಾಂತರ ವೃತ್ತನಿರೀಕ್ಷಕರ ನೇತೃತ್ವದ ಧರ್ಮಸ್ಥಳ ಪೊಲೀಸ್ ಠಾಣಾ ಅಧಿಕಾರಿ/ ಸಿಬ್ಬಂದಿಗಳ ತನಿಖಾ ತಂಡವು ಡಿ. 30 ರಂದು ಆರೋಪಿತರುಗಳಾದ ಮಹಮ್ಮದ್ ಇಕ್ಬಾಲ್ ಮತ್ತು ಮಹಮ್ಮದ್ ಶಹಬಾದ ಎಂಬವರುಗಳನ್ನು ಬಾಡಿ ವಾರೆಂಟ್ ನಲ್ಲಿ ಪೊಲೀಸ್ ವಶಕ್ಕೆ ಪಡೆದು, ಪ್ರಕರಣದ ತನಿಖೆಯನ್ನು ನಡೆಸಿ, ಆರೋಪಿಗಳನ್ನು ವಶಕ್ಕೆ ಪಡೆದು, ಅವರುಗಳಿಂದ ರೂ. 20000/- ಹಣವನ್ನು ಸ್ವಾದೀನಪಡಿಸಿಕೊಂಡಿರುತ್ತಾರೆ.
ಸದ್ರಿ ಆರೋಪಿತರನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನವನ್ನು ವಿಧಿಸಿ ಆದೇಶಿಸಿರುತ್ತದೆ.