Site icon Suddi Belthangady

ಜ. 07-12: ಪೆರ್ಲ – ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನ ಬ್ರಹ್ಮಕಲಶೋತ್ಸವ – ಪೂರ್ವಭಾವಿ ಸಮಾಲೋಚನೆ ಸಭೆ

ಬಂದಾರು: ಗ್ರಾಮದ ಪೆರ್ಲ – ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಜ. 07 ರಿಂದ 12 ರವರೆಗೆ ನಡೆಯುವ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನೆ ಸಭೆ ಜ. 02 ರಂದು ನಡೆಯಿತು.

ಪ್ರಗತಿಪರ ಕೃಷಿಕರಾದ ಧರ್ಣಪ್ಪ ಗೌಡ ಅಂಡಿಲ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಈ ಸಂದರ್ಭದಲ್ಲಿ ಸೀತಾರಾಮ ಶೆಟ್ಟಿ ಕೆಂಬರ್ಜೆ ಮಾರ್ಗದರ್ಶನ ನೀಡಿದರು. ಉದ್ಯಮಿ ರೈತಬಂಧು ಆಹಾರೋಧ್ಯಮ ಮಾಲಕ ಶಿವಶಂಕರ ನಾಯಕ್, ಬ್ರಹ್ಮಕಲಶೋತ್ಸವ ಪ್ರಧಾನ ಸಂಚಾಲಕ ಬಾಲಕೃಷ್ಣ ಪೂಜಾರಿ ಬಜಗುತ್ತು, ಅಧ್ಯಕ್ಷ ಮಹಾಬಲ ಗೌಡ ಸಲಹೆ ಸೂಚನೆ ಮಾಹಿತಿ ಅವಲೋಕನ ಮಾಡಿದರು.

ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಪರಪ್ಪಾದೆ, ಕೋಶಾಧಿಕಾರಿ ಕೇಶವ ಕೊಂಗುಜೆ, ಆಡಳಿತ ಮಂಡಳಿ ಅಧ್ಯಕ್ಷ ರಮೇಶ್ ಗೌಡ, ಅರ್ಚಕ ಅನಂತರಾಮ ಶಬರಾಯ, ಅನುವಂಶೀಯ ಆಡಳಿಯ ಮೊಕ್ತೇಸರು ಕುಕ್ಕಪ್ಪ ಗೌಡ ಉಪಸ್ಥಿತರಿದ್ದರು. ಜೀರ್ಣೋದ್ದಾರ ಸಮಿತಿ ಮಾಜಿ ಅಧ್ಯಕ್ಷ ಆದಪ್ಪ ಗೌಡ, ಆಡಳಿತ ಮಂಡಳಿ ಕಾರ್ಯದರ್ಶಿ ಉಮೇಶ್ ಗೌಡ, ಮಹಿಳಾ ಸಮಿತಿಯ ಜ್ಯೋತಿ ಕುರುಡಂಗೆ ಸಮಯೋಚಿತವಾಗಿ
ಅನಿಸಿಕೆ ವ್ಯಕ್ತಪಡಿಸಿದರು.

ಈ ಸಭೆಯಲ್ಲಿ ಆಡಳಿತ ಮಂಡಳಿಯ, ಬ್ರಹ್ಮಕಲಶೋತ್ಸವ ಸಮಿತಿಯ, ಎಲ್ಲಾ ಉಪಸಮಿತಿಯ ಸಂಚಾಲಕರು, ಸಹಸಂಚಾಲಕರು, ಸರ್ವ ಸದಸ್ಯರು, ಉಪಸ್ಥಿತರಿದ್ದರು. ಬ್ರಹ್ಮಕಲಶೋತ್ಸವ ಜೊತೆ ಕಾರ್ಯದರ್ಶಿ ಸತೀಶ್ ಬಾಲಂಪಾಡಿ ಕಾರ್ಯಕ್ರಮ ನಿರ್ವಹಿಸಿದರು.

Exit mobile version