Site icon Suddi Belthangady

ಅರಸಿನಮಕ್ಕಿ: ಸ. ಪ. ಪೂ. ಕಾಲೇಜ್ ನಲ್ಲಿ ಪ್ರತಿಭಾ ಪುರಸ್ಕಾರ

ಅರಸಿನಮಕ್ಕಿ: ಸರಕಾರಿ ಪದವಿ ಪೂರ್ವ ಕಾಲೇಜ್ ನ ಪ್ರತಿಭಾ ಪುರಸ್ಕಾರವು ಕಾಲೇಜಿನ ಪ್ರಾಂಶುಪಾಲ ರಾಮಯ್ಯ ಶೆಟ್ಟಿ ಅಧ್ಯಕ್ಷತೆಯಲ್ಲಿ ಜ. 3 ರಂದು ನಡೆಯಿತು.

ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಆಗಮಿಸಿದ ಗ್ರಾಮ ಪಂಚಾಯತ್ ಉಪಾಧ್ಯಕ್ಷರು ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಸುದೀರ್ ಕುಮಾರ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ವಿದ್ಯಾರ್ಥಿಗಳು ತಮ್ಮ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಲಹೆ ನೀಡಿದರು.

ಸರಕಾರಿ ಪದವಿ ಪೂರ್ವ ಕಾಲೇಜು ಕೊಕ್ಕಡ ಇಲ್ಲಿಯ ಪ್ರಾಂಶುಪಾಲ ವಿಶ್ವನಾಥ ರೈ ಮಾತನಾಡಿ ವಿದ್ಯಾರ್ಥಿಗಳು ಶೈಕ್ಷಣಿಕ ಅಭಿವೃದ್ಧಿ ದೃಷ್ಟಿಯಿಂದ ವಿದ್ಯಾಭ್ಯಾಸದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಿ ಎಂದು ಶುಭ ಹಾರೈಸಿದರು.

ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಶ್ರೀರಂಗ ದಾಮ್ಲೆ ಮತ್ತು ಸರಕಾರಿ ಪ್ರೌಢ ಶಾಲಾ ಅರಸಿನಮಕ್ಕಿ ಮುಖ್ಯ ಶಿಕ್ಷಕಿ ಮಂಜುಳಾ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಕಳೆದ ಶೈಕ್ಷಣಿಕ ವರ್ಷದಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳ ವಿವರವನ್ನು ಉಪನ್ಯಾಸಕರಾದ ರಮಣಿ, ಉಷಾ, ರೇಷ್ಮಾ, ಸಂಪ್ರೀತಾ, ರಶ್ಮಿತಾ ವಾಚಿಸಿದರು.

ಕಾರ್ಯಕ್ರಮದಲ್ಲಿ ಉಪನ್ಯಾಸಕಿ ಪವಿತ್ರ ಪಿ. ಎಸ್. ಸ್ವಾಗತಿಸಿ, ಸೌಮ್ಯಶ್ರೀ ನಿರೂಪಿಸಿದರು. ನಿವೇದಿತಾ ಧನ್ಯವಾದವಿತ್ತರು.

Exit mobile version