Site icon Suddi Belthangady

ಬರೆಂಗಾಯ ಶಾಲೆಯ ಅಮೃತ ಮಹೋತ್ಸವ – ಉದ್ಘಾಟನೆ ಹಾಗೂ ಸಭಾ ಕಾರ್ಯಕ್ರಮ

ನಿಡ್ಲೆ: ಬರೆಂಗಾಯ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಅಮೃತ ಮಹೋತ್ಸವ ಉದ್ಘಾಟನೆ ಸಮಾರಂಭ ಜ. 4 ರಂದು ಬರೆಂಗಾಯ ಶಾಲೆಯಲ್ಲಿ ನಡೆಯಿತು.

ಅಮೃತ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷ ಹಾಗೂ ಉದ್ಯಮಿ ರಮೇಶ್ ರಾವ್ ಕೊಡಂಗೆ ಧ್ವಜಾರೋಹಣ ನೆರವೇರಿಸಿದರು.

ನೂತನ ಕೊಠಡಿಯ ಉದ್ಘಾಟನೆ: ಶಾಲಾ ಅಮೃತ ಮಹೋತ್ಸವದ ಸವಿನೆನಪಿಗಾಗಿ ದಿ. ಅನಂತ ಪದ್ಮನಾಭಯ್ಯ ಪಾಂಡೀಲು, ಕುಟುಂಬಸ್ಥರು ನೀಡಿದ ನೂತನ ಕೊಠಡಿಯನ್ನು ಶಾಸಕ ಹರೀಶ್ ಪೂಂಜ ಉದ್ಘಾಟನೆ ಮಾಡಿದರು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿಡ್ಲೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ಯಾಮಲಾ ಅಧ್ಯಕ್ಷತೆಯನ್ನು ವಹಿಸಿದ್ದರು. ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ದೀಪ ಪ್ರಜ್ವಲನೆ ಮಾಡಿದರು. ಮುಖ್ಯ ಅತಿಥಿಗಳಾಗಿ ಅಮೃತ ಮಹೋತ್ಸವ ಸಮಿತಿಯ ಅಧ್ಯಕ್ಷ ಪ್ರವೀಣ್ ಹೆಬ್ಬಾರ್, ಜ್ಯೋತಿ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶಿವರಂಜನ್ ಹೆಬ್ಬಾರ್, ಅಮೃತ ಮಹೋತ್ಸವ ಸಮಿತಿಯ ಕೋಶಾಧಿಕಾರಿ ಕೃಷ್ಣ ಕುಮಾರ್‌ ಕಾಟ್ಲ, ಎಸ್. ಡಿ. ಎಮ್. ಸಿ ಅಧ್ಯಕ್ಷ ರುಕ್ಮಯ್ಯ ಪೂಜಾರಿ, ನಿಡ್ಲೆ ಗ್ರಾಮ ಪಂಚಾಯತ್ ಸದಸ್ಯರಾದ ಶೈಲಜಾ, ವಿಜಯ, ನಿಡ್ಲೆ ಕ್ಲಸ್ಟರ್ ಸಿ. ಆರ್. ಪಿ. ಪ್ರತಿಮಾ, ನಿಡ್ಲೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಿನೇಶ್, ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಾ ಕೇಸರಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ಸುರೇಂದ್ರ, ಉದ್ಯಮಿ ಶಿವರಾಮ್ ಕೊಡಂಗೆ, ಶಾಲೆಯ ವಿದ್ಯಾರ್ಥಿ ನಾಯಕ ಮಿಥುನ್ ಎ. ಉಪಸ್ಥಿತರಿದ್ದರು.

2022-23 ನೇ ಹಾಗೂ 2023-24 ನೇ ಸಾಲಿನಲ್ಲಿ ಎಸ್. ಎಸ್. ಎಲ್. ಸಿ. ಯಲ್ಲಿ ಶೇ. 85ಕ್ಕಿಂತ ಹೆಚ್ಚು ಅಂಕ ಪಡೆದ ಶಾಲೆಯ ಹಿರಿಯ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

2022-23 ನೇ ಹಾಗೂ 2023-24 ನೇ ಸಾಲಿನಲ್ಲಿ 8 ನೇ ತರಗತಿಯ ಎನ್. ಎಂ. ಎಂ. ಎಸ್.ಪರೀಕ್ಷೆಯಲ್ಲಿ ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾದ ಬರೆಂಗಾಯ ಶಾಲೆಯ ಹಿರಿಯ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

2023-24ನೇ ಸಾಲಿನಲ್ಲಿ ಸ್ಫೂರ್ತಿ ಪ್ರಶಸ್ತಿಗೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಬರೆಂಗಾಯ ಶಾಲೆಯ ಅಮೂಲ್ಯ ಸೇವೆ ಸಲ್ಲಿಸಿದ ಶಿಕ್ಷಕರನ್ನು ಗೌರವಿಸಲಾಯಿತು.

ಶಾಲೆಯಲ್ಲಿ ಅಮೂಲ್ಯ ಸೇವೆ ಸಲ್ಲಿಸಿದ ಎಸ್. ಡಿ. ಎಂ. ಸಿ ಸದಸ್ಯರಾದ ಗಣೇಶ್ ತಾಮ್ಹಣ್ ಕರ್ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸ್ಮರಣ ಸಂಚಿಕೆಯನ್ನು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಬಿಡುಗಡೆಗೊಳಿಸಿದರು.

ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ನಿಡ್ಲೆ ಕ್ಲಸ್ಟರ್ ಸಿ. ಆರ್. ಪಿ. ಪ್ರತಿಮಾ, ನಿಡ್ಲೆ ಗ್ರಾಮ ಪಂಚಾಯಿತ್ ಅಧ್ಯಕ್ಷೆ ಶ್ಯಾಮಲ, ನಿಡ್ಲೆ ಗ್ರಾಮ ಪಂಚಾಯತ್ ಸದಸ್ಯರಾದ ವಿಜಯ, ಶೈಲಜಾ, ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಾ ಕೇಸರಿ, ಶಾಲೆಯ ವತಿಯಿಂದ ಗೌರವಿಸಲಾಯಿತು.

ಶಾಲೆಯ ವಿದ್ಯಾರ್ಥಿಗಳಾದ ಅಪೇಕ್ಷಾ, ಭಕ್ತಿ, ಚಿಂತನಾ, ಅಶ್ವಿತಾ ಪ್ರಾರ್ಥನೆ ಮಾಡಿದರು. ಶಾಲೆಯ ಮುಖ್ಯ ಶಿಕ್ಷಕ ಗೋಪಾಲ್ ಸ್ವಾಗತಿಸಿ, ಶಾಲೆಯ ಶಿಕ್ಷಕ ಸ್ವಾಮಿ ಹೆಚ್. ಎಸ್. ಕಾರ್ಯಕ್ರಮ ನಿರೂಪಿಸಿ, ಗೀತಾ ಧನ್ಯವಾದವಿತ್ತರು. ಸಂಜೆ ಅಂಗನವಾಡಿ ಪುಟಾಣಿಗಳು ಹಾಗೂ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

Exit mobile version