p>
ಬೆಳ್ತಂಗಡಿ: ಧರ್ಮಪ್ರಾಂತ್ಯದ ನೇತೃತ್ವದಲ್ಲಿ ಜ. 4 ರಂದು ಬಿಷಪ್ ಹೌಸ್ ಬೆಳ್ತಂಗಡಿಯಲ್ಲಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತೀ ವಂದನೀಯ ಲಾರೆನ್ಸ್ ಮುಕ್ಕುಯಿ ನೇತ್ರತ್ವದಲ್ಲಿ ಮುಖ್ಯ ಮಂತ್ರಿ ಪದಕ ವಿಜೇತರಾಗಿರುವ ವೃತ್ತ ನಿರೀಕ್ಷಕರಾದ ಸಂದೇಶ್ ಪಿ. ಜಿ ರ ವರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಪ್ರಸ್ತುತ ಮೂಡಬಿದಿರೆಯಲ್ಲಿ ವೃತ್ತ ನಿರೀಕ್ಷಕರಾದ ಸಂದೇಶ್ ಪಿ.ಜಿ ದಿಟ್ಟತನದ ಸೇವೆಯನ್ನು ವಿಶೇಷವಾಗಿ ಸ್ಮರಿಸುತ್ತಾ ಸನ್ಮಾನಿಸಲಾಯಿತು.
ಸನ್ಮಾನವನ್ನು ಸ್ವೀಕರಿಸಿದ ಸಂದೇಶ್ ಪಿ. ಜಿ ಸನ್ಮಾನಕ್ಕೆ ವಿಶೇಷ ಕೃತಜ್ಞತೆಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಧರ್ಮಪ್ರಾಂತ್ಯದ ವಿವಿಧ ಧರ್ಮಗುರುಗಳು ಹಾಗೂ ಧರ್ಮ ಭಗಿನಿಯರು ಉಪಸ್ಥಿತರಿದ್ದರು.