Site icon Suddi Belthangady

ಬೆಳ್ತಂಗಡಿ ತಾಲೂಕು ಮೈದಾನದಲ್ಲಿ ಅಗ್ನಿ ಅವಘಡ – ತಪ್ಪಿದ ಭಾರಿ ಅನಾಹುತ

ಬೆಳ್ತಂಗಡಿ: ತಾಲೂಕು ಮೈದಾನದಲ್ಲಿ ಜ .5 ರಂದು ಮಧ್ಯಾಹ್ನ ಅಗ್ನಿ ಅವಘಡ ಸಂಭವಿಸಿದೆ. ಭಾಗಶಃ ಮೈದಾನ ಬೆಂಕಿಗೆ ಆಹುತಿಯಾಗಿದೆ.

ಸಾರ್ವಜನಿಕರ ಸಮಯಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ. ಘಟನೆಯಲ್ಲಿ ಯಾವುದೇ ಹಾನಿ ಸಂಭವಿಸಿರುವುದಿಲ್ಲ.

ಬೆಂಕಿ ನಂದಿಸುವ ಕಾರ್ಯದಲ್ಲಿ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಯಶಸ್ವಿಯಾಗಿದ್ದಾರೆ.

ಬೆಂಕಿ ನಂದಿಸಲು ಸಹಕರಿಸಿದ ಸ್ಥಳೀಯರಿಗೆ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Exit mobile version