p>
ಅಳದಂಗಡಿ: ಶ್ರೀ ಸೋಮನಾಥೇಶ್ವರಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರಾ ಮಹೋತ್ಸವ ಜ. 8 ರಿಂದ 20 ರವರೆಗೆ ನಡೆಯಲಿದೆ. ಇದರ ಅಂಗವಾಗಿ ಪೂರ್ವಭಾವಿ ಸಭೆ ಜ. 4 ರಂದು ಅಧ್ಯಕ್ಷ ತಿಮ್ಮಣ್ಣರಸರಾದ ಪದ್ಮಪ್ರಸಾದ್ ಅಜಿಲರ ಅಧ್ಯಕ್ಷತೆಯಲ್ಲಿ ತಾಲೂಕಿನ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ನಡೆಯಿತು.
ಸಭೆಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಹರೀಶ್ ಕುಮಾರ್, ಕೆ. ಪಿ. ಸಿ. ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ಡಿ. ವೈ.ಎಸ್. ಪಿ ವಿಜಯ ಪ್ರಸಾದ್, ಬ್ರಹ್ಮ ಕಲಶೋತ್ಸವ ಸಮಿತಿಯ ಪ್ರಧಾನ ಸಂಚಾಲಕ ಶಿವಪ್ರಸಾದ್ ಅಜಿಲರು, ಕಾರ್ಯಧಕ್ಷ ದೇವೇಂದ್ರ ಹೆಗ್ಡೆ ಕೊಕ್ರಾಡಿ, ತಾಲೂಕು ಶಿಕ್ಷಣಾಧಿಕಾರಿ ತಾರಕೇಸರಿ, ಆರೋಗ್ಯ ಇಲಾಖೆ ಅಧಿಕಾರಿ, ಮೆಸ್ಕಾಂ ಇಲಾಖೆ ಅಧಿಕಾರಿಗಳು, ಅಗ್ನಿ ಶಾಮಕ ಇಲಾಖೆ ಅಧಿಕಾರಿಗಳು, ರಾಷ್ಟ್ರೀಯ ಹೆದ್ದಾರಿ ಇಲಾಖೆ ಅಧಿಕಾರಿಗಳು, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು, ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಯ ಗ್ರಾಮ ಮಟ್ಟದ ಪದಾಧಿಕಾರಿಗಳು ಮತ್ತು ತಾಲೂಕಿನ ಇತರ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.