Site icon Suddi Belthangady

ಚಾರ್ಮಾಡಿ: ಕಕ್ಕಿಂಜೆಯಲ್ಲಿ ವಿಶ್ವ ಹಿಂದೂ ಪರಿಷದ್ – ಬಜರಂಗದಳ ಬೃಹತ್ ಪ್ರತಿಭಟನೆ

ಚಾರ್ಮಾಡಿ: ಮೃತ್ಯುಂಜಯ ನದಿಗೆ ಗೋಮಾಂಸ ತ್ಯಾಜ್ಯ ಹಾಕಿ ನದಿಯನ್ನು ಅಪವಿತ್ರಗೊಳಿಸಿದ ಆರೋಪಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಕಕ್ಕಿಂಜೆಯಲ್ಲಿ ಜ. 6 ರಂದು ಬೃಹತ್ ಪ್ರತಿಭಟನೆ ನಡೆಯಿತು.
ಈ ಸಂದರ್ಭದಲ್ಲಿ ಭಜರಂಗದಳ ವಿಶ್ವ ಹಿಂದೂ ಪರಿಷದ್ ಮಂಗಳೂರು ವಿಭಾಗದ ಸಮಯೋಜಕ ಪುನೀತ್ ಅತ್ತಾವರ, ವಿಶ್ವ ಹಿಂದೂ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ವಿಶ್ವ ಹಿಂದೂ ಪರಿಷದ್ ಬಜರಂಗದಳ ತಾಲೂಕು ಪ್ರಖಂಡದ ಅಧ್ಯಕ್ಷ ದಿನೇಶ್ ಚಾರ್ಮಾಡಿ, ತಾಲೂಕು ಸಂಯೋಜಕ ಸಂತೋಷ್ ಅತ್ತಾಜೆ, ಗೋ ರಕ್ಷಕ ರಮೇಶ ಧರ್ಮಸ್ಥಳ ಉಪಸ್ಥಿತರಿದ್ದರು.

ಬೆಳ್ತಂಗಡಿ ಪ್ರಖಂಡದ ಕಾರ್ಯದರ್ಶಿ ಮೋಹನ್ ಬೆಳ್ತಂಗಡಿ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಅಖಿಲ್ ರೆಖ್ಯ ಸ್ವಾಗತಿಸಿದರು. ಪ್ರತಿಭಟನಾಕಾರರು ಚಾರ್ಮಾಡಿ ಪಂಚಾಯಿತಿ ಮೂಲಕ ಮನವಿ ಸಲ್ಲಿಸಿದರು.

Exit mobile version