ತೋಟತ್ತಾಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ), ಚಿಬಿದ್ರೆ ಇದರ ವತಿಯಿಂದ ಫೆ. 9 ರಂದು ನಡೆಯುವ ಸಂಘದ ವಾರ್ಷಿಕೋತ್ಸವದ ಪ್ರಯುಕ್ತ ಪೂರ್ವಸಿದ್ಧತಾ ಸಭೆಯು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ(ರಿ) ತೋಟತ್ತಾಡಿ, ಚಿಬಿದ್ರೆ ಇದರ ಅಧ್ಯಕ್ಷ ಸನತ್ ಕುಮಾರ್ ಮೂರ್ಜೆ ಇವರ ಅಧ್ಯಕ್ಷತೆಯಲ್ಲಿ ಜ. 5 ರಂದು ಸಂಘದ ವಠಾರದಲ್ಲಿ ನಡೆಯಿತು.
ಫೆ. 9 ರಂದು ಬೆಳಿಗ್ಗೆ ಗಣಹೋಮ, ಸತ್ಯನಾರಾಯಣ ಪೂಜೆ ಮತ್ತು ಗುರುಪೂಜೆಯನ್ನು ನಡೆಸುವ ಬಗ್ಗೆ ತೀರ್ಮಾನಿಸಲಾಯಿತು. ನಂತರ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಕಳೆದ ಬಾರಿಯ ಎಸ್. ಎಸ್. ಎಲ್. ಸಿ ಮತ್ತು ದ್ವಿತೀಯ ಪಿ. ಯು. ಸಿ ಯಲ್ಲಿ 500ಕ್ಕಿಂತ ಮೇಲ್ಪಟ್ಟು ಅಂಕಗಳಿಸಿದ ಸ್ವಜಾತಿ ವಿದ್ಯಾರ್ಥಿಗಳನ್ನು ಗೌರವಿಸುವ ಬಗ್ಗೆ ತೀರ್ಮಾನಿಸಲಾಯಿತು.
ಸಭೆಯಲ್ಲಿ ಮಹಿಳಾ ಬಿಲ್ಲವ ವೇದಿಕೆಯ ಅಧ್ಯಕ್ಷೆ ಪ್ರೇಮ ಹೊಸಮನೆ, ಕಾರ್ಯದರ್ಶಿ ನಿಶ್ಮಿತಾ ಪ್ರದೀಪ್, ಸಂಘದ ಮೂರು ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು ಭಾಗವಹಿಸಿದ್ದರು. ಸನತ್ ಕುಮಾರ್ ಸ್ವಾಗತಿಸಿ, ಪ್ರಮೀಳಾ ದೇಜಪ್ಪ ಪೂಜಾರಿ ಕಕ್ಕಿಂಜೆ ಧನ್ಯವಾದವಿತ್ತರು.