Site icon Suddi Belthangady

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಸತೀಶ್ ಕೆ. ಕಾಶಿಪಟ್ಣ – ಉಪಾಧ್ಯಕ್ಷರಾಗಿ ಶ್ರೀಪತಿ ಉಪಾಧ್ಯಾಯ ಅವಿರೋಧ ಆಯ್ಕೆ

ಪೆರಾಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯು ಜ. 7 ರಂದು ನಡೆದ ಚುನಾವಣೆಯಲ್ಲಿ ಸತತ 5ನೇ ಭಾರಿಗೆ ಅಧ್ಯಕ್ಷರಾಗಿ ಸತೀಶ್ ಕೆ. ಕಾಶಿಪಟ್ಣ,
ಉಪಾಧ್ಯಕ್ಷರಾಗಿ ಶ್ರೀಪತಿ ಉಪಾಧ್ಯಾಯ ಅವಿರೋಧವಾಗಿ ಆಯ್ಕೆಯಾದರು.

ನೂತನ ನಿರ್ದೇಶಕರಾಗಿ ಸೀತಾರಾಮ್ ರೈ, ಪ್ರವೀಣ್ ಗಿಲ್ಬರ್ಟ್ ಪಿಂಟೊ, ದೇವಕಿ ಡಿ. ಶೆಟ್ಟಿ, ಹರಿಪ್ರಸಾದ್, ರಾಜೇಶ್ ಶೆಟ್ಟಿ, ಕೃಷ್ಣಪ್ಪ, ಅಕ್ಷಯ ಕುಮಾರ್, ಸುರೇಶ್, ವಿಜಯ ನಾಯ್ಕ, ಸುಜಾತ ಇವರು ಆಯ್ಕೆಯಾಗಿದ್ದಾರೆ.

ಚುನಾವಣಾಧಿಕಾರಿಯಾಗಿ ಬೆಳ್ತಂಗಡಿ ಸಹಕಾರಿ ಅಭಿವೃದ್ಧಿ ಅಧಿಕಾರಿ ಪ್ರತಿಮಾ ಬಿ. ವಿ. ರವರು ಭಾಗವಹಿಸಿ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ನೂತನ ವಾಗಿ ಆಯ್ಕೆಯಾದ ಅಧ್ಯಕ್ಷ, ಉಪಾಧ್ಯಕ್ಷರಿಗೆ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹೇಮಾ, ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯು. ಶೇಖ್ ಲತೀಫ್, ಎಸ್. ಡಿ. ಸಿ. ಸಿ. ಬ್ಯಾಂಕ್ ಪ್ರತಿನಿಧಿ ಸುದರ್ಶನ್, ಸಿಬಂದಿ ವರ್ಗದವರು ಅಭಿನಂದಿಸಿದರು.

Exit mobile version