Site icon Suddi Belthangady

ಧರ್ಮಸ್ಥಳದಲ್ಲಿ ದೇವರ ದರ್ಶನಕ್ಕಾಗಿ ಆರಾಮದಾಯಕ ಸರತಿಸಾಲಿನ ನೂತನ ಸಂಕೀರ್ಣ “ಶ್ರೀ ಸಾನ್ನಿಧ್ಯ” ಉದ್ಘಾಟನೆ – ಉಪರಾಷ್ಟ್ರಪತಿಯವರಿಂದ ಉದ್ಘಾಟನೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಾದಿಗಳಿಗೆ ದೇವರ ದರ್ಶನಕ್ಕಾಗಿ ಆರಾಮದಾಯಕ ಸರತಿ ಸಾಲಿನ ನೂತನ ಸಂಕೀರ್ಣ “ಶ್ರೀ ಸಾನ್ನಿಧ್ಯ” ಇದರ ಉದ್ಘಾಟನೆಯನ್ನು ಜ. 7 ರಂದು ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಉದ್ಘಾಟಿಸಿದರು.

ಬಳಿಕ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದರು. ಡಿ. ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿದ್ದರು. ಡಾ. ಸುದೇಶ್ ಧನ್‌ಕರ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಮಂಗಳೂರು ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ, ಜ್ಞಾನ ವಿಕಾಸ ಮಹಿಳಾ ಸಬಲೀಕರಣ ಕಾರ್ಯಕ್ರಮದ ಅಧ್ಯಕ್ಷೆ ಹೇಮಾವತಿ ವಿ. ಹೆಗ್ಗಡೆ, ಶ್ರೀ ಧ. ಮ. ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಡಿ. ಸುರೇಂದ್ರ ಕುಮಾರ್, ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ 2024-25 ನೇ ಸಾಲಿನ ಜ್ಞಾನದೀಪ ಕಾರ್ಯಕ್ರಮದ ಶುಭಾರಂಭ ನಡೆಯಿತು. ಸಾಂಕೇತಿಕವಾಗಿ ಇಬ್ಬರಿಗೆ ವಿದ್ಯಾರ್ಥಿ ವೇತನವನ್ನು ಉಪರಾಷ್ಟ್ರಪತಿ ವಿತರಿಸಿದರು.
ಕಾರ್ಯಕ್ರಮದ ಮೊದಲು ದೇವರ ದರ್ಶನ ಪಡೆದರು.

Exit mobile version