ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜ. 4 ರಂದು ಶಾಲಾ ವಾರ್ಷಿಕೋತ್ಸವವು ಕ್ಷೇತ್ರದ ಅಮೃತವರ್ಷಿಣಿ ಸಭಾಂಗಣದಲ್ಲಿ ನೆರವೇರಿತು.
ಪೂರ್ವಾಹ್ನ 8 ಗಂಟೆಗೆ ಸರಿಯಾಗಿ ಮುಖ್ಯ ಅತಿಥಿಗಳಾದ ಧರ್ಮಸ್ಥಳದ ಜಮಾ ಉಗ್ರಾಣದ ನಿವೃತ್ತರಾದ ಶ್ರೀ ಭುಜಬಲಿ ಧ್ವಜಾರೋಹಣಗೈದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆಯನ್ನು ಶ್ರೀ ಧ. ಮಂ. ಎಜುಕೇಶನ್ ಟ್ರಸ್ಟ್ ಉಜಿರೆ ಇದರ ಕಾರ್ಯದರ್ಶಿ ಸತೀಶ್ ಚಂದ್ರ ಹಾಗೂ ಶಾಲಾ ಸಂಚಾಲಕ ಅನಂತಪದ್ಮನಾಭ ಭಟ್, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಪ್ರಕಾಶ್ ಹೆಗ್ಡೆ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ, ಕಾರ್ಯಕ್ರಮದ ಯಶಸ್ಸಿಗೆ ಶುಭ ಕೋರಿದರು.
ಡಿ .ವೀರೇಂದ್ರ ಹೆಗ್ಗಡೆ , ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯ ಹರ್ಷೇಂದ್ರ ಕುಮಾರ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಸುಪ್ರಿಯ ಹರ್ಷೇಂದ್ರ ಕುಮಾರ್ ಶಾಲಾ ಸಂಚಿಕೆ ಭಾರತಿಯನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ನಂತರ ವಿದ್ಯಾರ್ಥಿಗಳಿಂದ ಯಕ್ಷಗಾನ, ಭರತನಾಟ್ಯ, ಸಂಗೀತ ಹಾಗೂ ನೃತ್ಯ ವೈವಿಧ್ಯ ಕಾರ್ಯಕ್ರಮಗಳು ಜರುಗಿದವು.
ವೇದಿಕೆಯಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿರುವ
ಯಕ್ಷಗಾನ ಗುರುಗಳಾದ ಲಕ್ಷ್ಮಣ ಗೌಡರನ್ನು ಸನ್ಮಾನಿಸಲಾಯಿತು.
ಶಾಲಾ ವಾರ್ಷಿಕ ವರದಿಯನ್ನು ಮುಖ್ಯೋಪಾಧ್ಯಾಯ ಕಮಲ್ ತೇಜು ರಜಪೂತ್ ವಾಚಿಸಿದರು.
ಸಾಂಸ್ಕೃತಿಕ ಕಾರ್ಯಕ್ರಮಗಳ ನಿರೂಪಣೆಯನ್ನು ಪೂರ್ಣಿಮಾ ಜೋಷಿ ಹಾಗೂ ಶ್ರೀಜಾ ಎ. ನೆರವೇರಿಸಿದರು.