ಕೊಯ್ಯೂರು: ಶಾಲಾ ವಾರ್ಷಿಕೋತ್ಸವ ಮತ್ತು ಸುಜ್ಞಾನ ಬಯಲು ರಂಗಮಂದಿರ ಉದ್ಘಾಟನೆಯನ್ನು ಶ್ರೀ ಪಂಚಾದುರ್ಗಾ ಪರಮೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕ ಅಶೋಕ್ ಕುಮಾರ್ ಬಾಂಗಿಣ್ಣಾಯ ಅಗ್ರಸಾಲೆ ದೀಪ ಬೆಳಗಿಸಿ ಉದ್ಘಾಟನೆ ಮಾಡಿ, ಶಾಲೆಯ ಅಭಿವೃದ್ಧಿಯಲ್ಲಿ ಶಿಕ್ಷಕರ, ಪೋಷಕರ ಮತ್ತು ವಿದ್ಯಾರ್ಥಿಗಳ ಪಾತ್ರ ಬಹಳ ಮಹತ್ತರವಾದುದು. ಹಿರಿಯ ವಿದ್ಯಾರ್ಥಿಗಳು ತಾವು ಕಲಿತ ಶಾಲೆಯ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡಾಗ ಶಾಲೆಯು ಅಭಿವೃದ್ಧಿಯನ್ನು ಹೊಂದಲು ಸಾಧ್ಯ ಎಂಬುದಾಗಿ ಹೇಳಿದರು.
ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಯ್ಯೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷ ದಯಾಮಣಿ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿಯ ಸದಸ್ಯರುಗಳಾದ ವಿಶಾಲಾಕ್ಷಿ, ಶಾರದಾ, ಶಿಕ್ಷಣ ಸಂಯೋಜಕಿ ಚೇತನಾಕ್ಷಿ, ಬೆಳ್ತಂಗಡಿ ಕ್ಲಸ್ಟರ್ ನ ಸಮೂಹ ಸಂಪನ್ಮೂಲ ವ್ಯಕ್ತಿ ವಾರಿಜ, ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನವೀನ್ ಗೌಡ ವಾದ್ಯಕೋಡಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಂತ ಕೃಷ್ಣ ಭಟ್, ಶಾಲಾ ಮುಖ್ಯೋಪಾಧ್ಯಾಯಿನಿ ಶ್ಯಾಮಲಾ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಪುರಂದರ ಗೌಡ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಚಂದ್ರಶೇಖರ ಮಾವಿನಕಟ್ಟೆ, ಶಾಲಾ ವಿದ್ಯಾರ್ಥಿ ನಾಯಕ ಮಾಸ್ಟರ್ ಕಾರ್ತಿಕ್, ಅಶೋಕ್ ಮತ್ತು ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷೆ ಚಂಪಾ ಮೊದಲಾದವರು ಉಪಸ್ಥಿತರಿದ್ದರು.