p>
ಬೆಳ್ತಂಗಡಿ: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಇತರೆ ಪರೀಕ್ಷೆಗಳು ) ಬೆಂಗಳೂರು ಇವರು ನಡೆಸಿದ ಚಿತ್ರಕಲಾ ಪರೀಕ್ಷೆಯಲ್ಲಿ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಶೇ100 ಫಲಿತಾಂಶ ದಾಖಲಿಸಿದೆ. ಹೈಯರ್ ಗ್ರೇಡ್ ಪರೀಕ್ಷೆಗೆ ಹಾಜರಾದ 67 ವಿದ್ಯಾರ್ಥಿಗಳಲ್ಲಿ 13 ಮಕ್ಕಳು ಉನ್ನತ ಶ್ರೇಣಿಯಲ್ಲಿ 54 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಶಾಲೆಯ ಚಿತ್ರಕಲಾ ಶಿಕ್ಷಕ ಚಿದಾನಂದ ತರಬೇತಿ ನೀಡಿರುತ್ತಾರೆ.