Site icon Suddi Belthangady

ಬೆಳಾಲು: ಸಿ. ಎ. ಬ್ಯಾಂಕ್ ನ ಉಪಾಧ್ಯಕ್ಷರು ಹಾಗೂ ನಿರ್ದೇಶಕರಾಗಿ ಆಯ್ಕೆಯಾದ ಪಂಚಾಯತ್ ಸದಸ್ಯರುಗಳಿಗೆ ಗೌರವಾರ್ಪಣೆ ಕಾರ್ಯಕ್ರಮ

ಬೆಳಾಲು: ಸಿ. ಎ. ಬ್ಯಾಂಕ್ ನ ಉಪಾಧ್ಯಕ್ಷರು ಹಾಗೂ ನಿರ್ದೇಶಕರಾಗಿ ಆಯ್ಕೆಯಾದ ಪಂಚಾಯತ್ ಸದಸ್ಯರುಗಳಿಗೆ ಬೆಳಾಲು ಗ್ರಾಮ ಪಂಚಾಯತ್ ವತಿಯಿಂದ ಗೌರವಾರ್ಪಣೆ ಕಾರ್ಯಕ್ರಮ ಜ. 8 ರಂದು ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ ಸಿ. ಎ. ಬ್ಯಾಂಕ್ ಉಪಾಧ್ಯಕ್ಷರಾಗಿ ಆಯ್ಕೆಯಾದ ದಿನೇಶ್ ಕೋಟ್ಯಾನ್ ರನ್ನು ಶಾಲು ಹಾಕಿ ಹೂಗುಚ್ಛ ನೀಡಿ ಗೌರವಿಸಿದರು. ನಿರ್ದೇಶಕರುಗಳಾಗಿ ಆಯ್ಕೆಯಾದ ಪ್ರವೀಣ್ ವಿಜಯ್ ಹಾಗೂ ಸುರೇಂದ್ರ ಗೌಡ ಇವರನ್ನು ಹೂ ನೀಡಿ ಗೌರವಿಸಲಾಯಿತು. ಈ ಕಾರ್ಯಕ್ರಮದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ತಾರಾನಾಥ್ ನಾಯ್ಕ, ಸದಸ್ಯರುಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Exit mobile version