p>
ಉಜಿರೆ: ಗ್ರಾಮ ಪಂಚಾಯತಿನ 2024-25 ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆ ಜ. 9 ರಂದು ಪಂಚಾಯತ್ ಅಧ್ಯಕ್ಷೆ ಉಷಾ ಕಿರಣ್ ಕಾರಂತ್ ಅಧ್ಯಕ್ಷತೆಯಲ್ಲಿ ಶಾರದಾ ಮಂಟಪದಲ್ಲಿ ಜರಗಿತು.
ನೆರಿಯ ಪಶು ವೈದ್ಯಾಧಿಕಾರಿ ಡಾ. ಯುತೀಶ್ ಕುಮಾರ್ ಮಾರ್ಗದರ್ಶನ ಅಧಿಕಾರಿಯಾಗಿ ಸಭೆಯನ್ನು ಮುನ್ನಡೆಸಿದರು.
ಪಂಚಾಯತ್ ಉಪಾಧ್ಯಕ್ಷ ರವಿ ಕುಮಾರ್ ಬರೆಮೇಲು, ಪಂಚಾಯತ್ ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪಿ. ಹೆಚ್. ಪ್ರಕಾಶ್ ಶೆಟ್ಟಿ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.
ಕಾರ್ಯದರ್ಶಿ ಶ್ರವಣ್ ಕುಮಾರ್ ಕಳೆದ ಗ್ರಾಮ ಸಭೆಯ ಅನುಪಾಲನಾ ವರದಿ ವಾಚಿಸಿದರು. ಸಿಬ್ಬಂದಿ ರಮೇಶ್ ನಾಯ್ಕ ವಾರ್ಡ್ ಸಭೆಗಳಲ್ಲಿ ಬಂದ ಬೇಡಿಕೆಯನ್ನು ಓದಿದರು. ಅಧಿಕಾರಿಗಳು ಇಲಾಖೆಯ ಮಾಹಿತಿ ನೀಡಿದರು. ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು, ಸಂಜೀವಿನಿ ಒಕ್ಕೂಟದ ಸದಸ್ಯರು, ಗ್ರಾಮಸ್ಥರು ಹಾಜರಿದ್ದರು. ಸಿಬ್ಬಂದಿಗಳು ಸಹಕರಿಸಿದರು.