Site icon Suddi Belthangady

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಬದನಾಜೆ ಶಾಲೆಗೆ ದೇಣಿಗೆ

ಉಜಿರೆ: ಸರಕಾರಿ ಉನ್ನತೀಕರಿಸಿದ ಶಾಲೆ ಬದನಾಜೆಯ ಶಾಲಾ ಸಭಾಂಗಣ ನಿರ್ಮಾಣಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ ರೂಪದಲ್ಲಿ 1. ಲಕ್ಷ ರೂ ಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್, ಬೆಳ್ತಂಗಡಿ ತಾಲೂಕು ಯೋಜನಾಧಿಕಾರಿ ಸುರೇಂದ್ರ ಕುಮಾರ್, ನಿವೃತ್ತ ಪ್ರಾದೇಶಿಕ ನಿರ್ದೇಶಕ ಸೀತಾರಾಮ ಶೆಟ್ಟಿ ಕೆಂಬರ್ಜೆ,
ಉಜಿರೆ ವಲಯ ಮೇಲ್ವಿಚಾರಕಿ ವನಿತಾ, ಸೇವಾ ಪ್ರತಿನಿಧಿ ಹೇಮಲತಾ ನೀಡಿದರು.

ಒಕ್ಕೂಟದ ಅಧ್ಯಕ್ಷರುಗಳಾದ ಬಾಬು ನಾಯ್ಕ, ಸುರೇಶ್ ನಾಯ್ಕ ಉಪಸ್ಥಿತರಿದ್ದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ನಿರಂಜನ್, ಸುಜ್ಞಾನ ನಿಧಿ ಯೋಜನೆಯ ಸಂಚಾಲಕ ಸುಂದರ ಬಂಗೇರ, ಸಹ ಸಂಚಾಲಕ ಸೋಮಶೇಖರ ಕೆ., ಪ್ರಗತಿ ಯುವಕ ಮಂಡಲದ ಅಧ್ಯಕ್ಷ ಪಿತಾಂಬರ ಪೂಜಾರಿ ದೇಣಿಗೆಯ ಚೆಕ್ಕನ್ನು ಸ್ವೀಕರಿಸಿದರು. ಶಾಲೆಯಲ್ಲಿ ಮಕ್ಕಳ ಕ್ಷೀರ ಭಾಗ್ಯ, ಅಕ್ಷರ ದಾಸೋಹ, ಶಾಲಾ ಪಾರ್ಥನೆಗೆ, ಸಭೆ ಸಮಾರಂಭ ಗಳಿಗೆ ಅನುಕೂಲವಾಗುವಂತೆ ಸುಮಾರು 15 ಲಕ್ಷ ವೆಚ್ಚದಲ್ಲಿ ಸಭಾಂಗಣ ರಚನೆ ಕಾರ್ಯ ಪ್ರಗತಿಯಲ್ಲಿದ್ದು, ಶಾಲಾ ಹಿರಿಯ ವಿದ್ಯಾರ್ಥಿಗಳು, ಶಾಲಾಭಿಮಾನಿಗಳು ಕೈ ಜೋಡಿಸುತ್ತಿದ್ದಾರೆ.

Exit mobile version