ಎಸ್. ಡಿ. ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ಪ್ರತಿಭಾ ಕಲೋತ್ಸವ – ಬಹುಮಾನ ವಿತರಣೆ

0

p>

ಉಜಿರೆ: ಜ. 8 ರಂದು ಭಾರತ್ ಸ್ಕೌಟ್ ಮತ್ತು ಗೈಡ್ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಮೂಡುಬಿದಿರೆ ಸ್ಥಳೀಯ ಸಂಸ್ಥೆ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ) ಮೂಡುಬಿದಿರೆ ಇವರ ಸಹಭಾಗಿತ್ವದಲ್ಲಿ ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ವಿದ್ಯಾಗಿರಿಯಲ್ಲಿ ನಡೆದ ಜಿಲ್ಲಾ ಮಟ್ಟದ ‘ಪ್ರತಿಭಾ ಕಲೋತ್ಸವ’ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಉಜಿರೆ ಎಸ್. ಡಿ. ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ, ನೃತ್ಯ ಸ್ಪರ್ಧೆಯಲ್ಲಿ 9ನೇ ತರಗತಿ ಅತುಲ ಪ್ರಥಮ, ಶಾಸ್ತ್ರೀಯ ಸಂಗೀತ 9ನೇ ತರಗತಿ ಮಂಥನ್ ಬಾಳಿಗ ದ್ವಿತೀಯ, ಪ್ರಬಂಧ 9ನೇ ತರಗತಿ ಸಮ್ಮೇದ್ ಜೈನ್ ತೃತೀಯ ಸ್ಥಾನವನ್ನು ಪಡೆದು ವಿಜೇತರಾಗಿರುತ್ತಾರೆ.

ಭಾಗವಹಿಸಿದ ಹಾಗೂ ವಿಜೇತರಾದ ವಿದ್ಯಾರ್ಥಿಗಳನ್ನು ಶಾಲಾ ಪ್ರಾಂಶುಪಾಲ ಮನ್ಮೋಹನ್ ನಾಯ್ಕ್ ಕೆ. ಜಿ ಹಾಗೂ ಶಿಕ್ಷಕ ವೃಂದ ಅಭಿನಂದಿಸಿ ಶುಭಹಾರೈಸಿದರು.

LEAVE A REPLY

Please enter your comment!
Please enter your name here