Site icon Suddi Belthangady

ಜಿಲ್ಲಾ ಮಟ್ಟದ ದೇಸಿ ತಳಿಗಳ ಸಂರಕ್ಷಣೆ ಮತ್ತು ಉತ್ತೇಜನ ಕಾರ್ಯಾಗಾರ

ಬೆಳ್ತಂಗಡಿ: ಜ. 13 ರಂದು ಪೂರ್ವಾಹ್ನ 10.30 ರಿಂದ ಜಿಲ್ಲಾ ಕೃಷಿ ತರಬೇತಿ ಕೇಂದ್ರ ಬೆಳ್ತಂಗಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದೇಸಿ ತಳಿಗಳ ಸಂರಕ್ಷಣೆ ಮತ್ತು ಉತ್ತೇಜನ ಕಾರ್ಯಾಗಾರವನ್ನು ಹಮ್ಮಿಕೊಂಡಿದ್ದು, ಕಾರ್ಯಕ್ರಮದಲ್ಲಿ 2020-21ನೇ ಯ ಸಾಲಿನ ರಾಷ್ಟ್ರೀಯ ಸಸ್ಯ ತಳಿ ಸಂರಕ್ಷಕ ರೈತ ಪ್ರಶಸ್ತಿ ಪುರಸ್ಕೃತ ತಳಿ ತಪಸ್ವಿ ಶ್ರೀ ಬಿ. ಕೆ. ದೇವರಾವ್ ಇವರು ಉಪಸ್ಥಿತರಿದ್ದು, ಕೃಷಿ ವಿಜ್ಞಾನ ಕೇಂದ್ರ ಮಂಗಳೂರುನ ವಿಜ್ಞಾನಿಗಳು, ಕೃಷಿ ಇಲಾಖೆಯ ಅಧಿಕಾರಿಗಳು ಹಾಗೂ ಪ್ರಗತಿಪರ ಕೃಷಿಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಕಾರ್ಯಾಗಾರದಲ್ಲಿ ದೇಸಿ ತಳಿಗಳ ಸಂರಕ್ಷಣೆ ಕುರಿತು ಉಪನ್ಯಾಸ, ಚರ್ಚಾಗೋಷ್ಠಿ ಹಾಗೂ ಭತ್ತದ ದೇಸಿ ತಳಿಗಳ ಪ್ರದರ್ಶನ ಇರಲಿದೆ. -ಸಹಾಯಕ ಕೃಷಿ ನಿರ್ದೇಶಕರು ಜಿಲ್ಲಾ ಕೃಷಿ ತರಬೇತಿ ಕೇಂದ್ರ ಬೆಳ್ತಂಗಡಿ.

Exit mobile version