ಬೆಳ್ತಂಗಡಿ: ಜ. 11 ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಕೌಶಲ್ಯಾಭಿವೃದ್ಧಿ ಯೋಜನೆಯಡಿ ಮೆಹಂದಿ ಡಿಸೈನ್ ಹಾಗೂ ಮದುಮಗಳ ಶೃಂಗಾರ ಮತ್ತು ಆರಿ ವರ್ಕ್ ಹಾಗೂ ಎಂಬ್ರಾಯಿಡರಿ ಎರಡು ತರಬೇತಿಯ ಸಮಾರೋಪ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತ್ ತರಬೇತುದಾರ ಜಯಾನಂದ ಪಿ. ಮಾತನಾಡಿ ಮಹಿಳೆಯರು ಇತರಿಗೆ ಅವಲಂಬಿಸದೆ, ಸ್ವಂತ ಉದ್ದಿಮೆ ಮಾಡಿದಾಗ ಆತ್ಮಸ್ಥೈರ್ಯ ಹೆಚ್ಚಿಸಿಕೊಳ್ಳಬಹುದು.
ಪೂಜ್ಯರ ಮಾತಿನಂತೆ ನಾವು ಪದವಿ ಪಡೆದು ಇತರರ ಲೆಕ್ಕ ಬರೆಯುವ ಬದಲು ನಮ್ಮ ಲೆಕ್ಕ ನಾವೇ ಬರೆಯುವುದು ಶ್ರೇಷ್ಠ ಎಂದು. ಇದನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಪ್ರಸ್ತುತ ಈ ತರಬೇತಿಗಳು ಬಹು ಬೇಡಿಕೆ ಇರುವ ಹಾಗೂ ಕಡಿಮೆ ಸಮಯದಲ್ಲಿ ಹೆಚ್ಚು ಸಂಪಾದನೆ ಮಾಡುವ ಸ್ವ ಉದ್ಯೋಗವಾಗಿದೆ ಎಂದರು. ತರಬೇತಿ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ವಿತರಿಸಿ ಶುಭಹಾರೈಸಿದರು. ಒಟ್ಟು 44 ಮಂದಿ ಭಾಗವಹಿಸಿ ತರಬೇತಿಯ ಸದುಪಯೋಗ ಪಡೆದುಕೊಂಡಿದ್ದಾರೆ. ಈ ಕಾರ್ಯಕ್ರಮದಲ್ಲಿ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಸೋಮನಾಥ್ ಕೆ., ಸಂಪನ್ಮೂಲ ವ್ಯಕ್ತಿಗಳಾದ ತುಳಸಿ ಮತ್ತು ಸೌಭಾಗ್ಯ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ತರಬೇತಿ ಸಂಯೋಜಕಿ ಜಯಶ್ರೀ ಎಲ್ಲರನ್ನು ಸ್ವಾಗತಿಸಿದರು. ಅಶ್ವಿನಿ ಇವರು ಕಾರ್ಯಕ್ರಮ ನಿರ್ವಹಣೆ ಮಾಡಿ ಧನ್ಯವಾದ ನೀಡಿದರು.