Site icon Suddi Belthangady

ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ – ಧಾರ್ಮಿಕ ಸಭೆಯಲ್ಲಿ ಡಿ. ವೀರೇಂದ್ರ ಹೆಗ್ಗಡೆ ಆಶೀರ್ವಚನ

ಬಂದಾರು: ಪೆರ್ಲ – ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮ ಕಲಶೋತ್ಸವದ 5 ನೇ ದಿನದ ಕಾರ್ಯಕ್ರಮದ ಅಂಗವಾಗಿ ನಡೆದ ಧಾರ್ಮಿಕ ಸಭೆಯಲ್ಲಿ ಧರ್ಮಸ್ಥಳದ ಡಿ. ವೀರೇಂದ್ರ ಹೆಗ್ಗಡೆ ಆಗಮಿಸಿ ಆಶೀರ್ವಚನ ಗೈದರು. ಬ್ರಹ್ಮಕಲಶೋತ್ಸವದ ಯಶಸ್ವಿಗೆ ಸಹಕರಿಸಿದವರನ್ನು ಗೌರವಿಸಿದರು.

ಅಧ್ಯಕ್ಷತೆಯನ್ನು ಉದ್ಯಮಿ ಕಿರಣ್ ಚಂದ್ರ ಡಿ. ಪುಷ್ಪಗಿರಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ದ. ಕ. ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಗುರುವಾಯನಕೆರೆ ಎಕ್ಷಲ್ ಕಾಲೇಜು ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನೋಟರಿ ವಕೀಲ ಶ್ರೀನಿವಾಸ ಗೌಡ, ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಕಣಿಯೂರು ರೈತ ಬಂಧು ಮಾಲಕ ಶಿವ ಶಂಕರ್ ನಾಯಕ್, ಪದ್ಮುಂಜ ಸಹಕಾರ ಸಂಘದ ಅಧ್ಯಕ್ಷ ರಕ್ಷಿತ್ ಪಣೆಕರ ಭಾಗವಹಿಸಿದ್ದರು.

ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಸಂಚಾಲಕ ಬಿ. ಬಾಲಕೃಷ್ಣ ಪೂಜಾರಿ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು.
ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಮಹಾಬಲ ಗೌಡ ನಾಗಂದೋಡಿ, ಪ್ರದಾನ ಕಾರ್ಯದರ್ಶಿ ಹರೀಶ್ ಪರಪ್ಪಾಜೆ, ಕೋಶಾಧಿಕಾರಿ ಕೇಶವ ಗೌಡ ಕೊಂಗುಜೆ, ಆನುವಂಶಿಕ ಮೋಕ್ತೆಸರ ಕುಕ್ಕಪ್ಪ ಗೌಡ ಕೋಡಿಮಜಲು, ಆಡಳಿತ ಸಮಿತಿ ಅಧ್ಯಕ್ಷ ರಮೇಶ್ ಗೌಡ ಅಡ್ಡಾರು, ಕಾರ್ಯದರ್ಶಿ ಉಮೇಶ್ ಗೌಡ ಅಂಗಡಿಮಜಲು, ಮಹಿಳಾ ಸಮಿತಿ ಅಧ್ಯಕ್ಷೆ ಶ್ವೇತಾ ಹಾರ್ತ್ಯಾರು, ಭಜನಾ ಮಂಡಳಿ ಅಧ್ಯಕ್ಷ ಲಕ್ಷ್ಮಣ ಗೌಡ ಫಲಸದ ಕೋಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪೆರ್ಲ ಬೈಪಾಡಿ ಅಂಗನವಾಡಿ, ಸರಕಾರಿ ಪ್ರೌಢ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಬೆಳ್ತಂಗಡಿ ವಾಣಿ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳಿಂದ ವಾಣಿ ಕಲಾ ವೈಭವ ನಡೆಯಿತು. ಉಪನ್ಯಾಸಕ ಮೋಹನ ಗೌಡ ನಿರೂಪಿಸಿ, ಉಪನ್ಯಾಸಕ ದಿವಾ ಕೊಕ್ಕಡ ವಂದಿಸಿದರು.

Exit mobile version