Site icon Suddi Belthangady

ವೈಬ್ರೆಂಟ್ ಶಿಕ್ಷಣ ಸಂಸ್ಥೆಯ ಶರತ್ ಗೋರೆರವರಿಗೆ ಕರ್ನಾಟಕ ಶಿಕ್ಷಣ ರತ್ನ ಪ್ರಶಸ್ತಿ

ಬೆಳ್ತಂಗಡಿ ಜ.11: ಮೂಡಬಿದಿರೆ ವೈಬ್ರೆಂಟ್ ಪದವಿ ಪೂರ್ವ ಕಾಲೇಜಿನ ನಿರ್ದೇಶಕ ಹಾಗೂ ಟ್ರಸ್ಟಿ ಶರತ್ ಗೋರೆ ಎ. ಎನ್‌. ವೈ. ಇ. ಎಲ್‌. ಪಿ ಗ್ರೂಪ್ ಕೊಡಮಾಡುವ 2024-25ನೇ ಸಾಲಿನ ಕರ್ನಾಟಕ ಶಿಕ್ಷಣ ರತ್ನ – ಅತ್ಯುತ್ತಮ ಭೌತಶಾಸ್ತ್ರ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ರಾಜ್ಯದ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿರುವ ಶರತ್ ಗೋರೆ ಶಿಕ್ಷಣ ರಂಗಕ್ಕೆ ನೀಡಿರುವ ಕೊಡುಗೆ ಹಾಗೂ ಗೈದಿರುವ ಸಾಧನೆಗಳನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಬೆಂಗಳೂರಿನ ಬಿ. ಆರ್ ಅಂಬೇಡ್ಕರ್ ಭವನದಲ್ಲಿ ಎ. ಎನ್‌. ವೈ. ಇ. ಎಲ್‌. ಪಿ ಸಂಸ್ಥೆಯ ನಿರ್ದೇಶಕ ಮೊಹಮ್ಮದ್ ಜಾಕೀರ್ ಹುಸೈನ್, ಕನ್ನಡ ಚಿತ್ರರಂಗದ ನಟ ರಾಕೇಶ್ ಅಡಿಗ ಮೊದಲಾದವರು ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

Exit mobile version