ಬಂದಾರು: ಪೆರ್ಲ – ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮ ಕಲಶೋತ್ಸವದ ಕೊನೆಯ ದಿನದ ಅಂಗವಾಗಿ ನಡೆದ ಧಾರ್ಮಿಕ ಸಭೆಯಲ್ಲಿ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಆಗಮಿಸಿ ಆಶೀರ್ವಚನ ಗೈದರು.
ಅಧ್ಯಕ್ಷತೆಯನ್ನು ಶಾಸಕ ಹರೀಶ್ ಪೂಂಜ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್, ದ. ಕ. ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ನಾವೂರು ಆರೋಗ್ಯ ಕ್ಲಿನಿಕ್ ಡಾ. ಪ್ರದೀಪ್, ಮುಂಡೂರು ಕ್ಷೇತ್ರದ ಧರ್ಮದರ್ಶಿ ಆನಂದ ಗೌಡ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ನಾಗೇಶ್ ಕುಮಾರ್, ಬೆಳಾಲು ಸಹಕಾರ ಸಂಘದ ಅಧ್ಯಕ್ಷ ಹೆಚ್. ಪದ್ಮ ಗೌಡ, ಕುರಾಯ ಶ್ರೀ ಸದಾಶಿವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಾಬು ಗೌಡ ಮಡ್ದಲಕಂಡ, ಭಾಗವಹಿಸಿದ್ದರು.
ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಮಹಾಬಲ ಗೌಡ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು. ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯದರ್ಶಿ ಸತೀಶ್ ಗೌಡ ಬಾಲಂಪಾಡಿರವರನ್ನು ಗೌರವಿಸಲಾಯಿತು.
ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಸಂಚಾಲಕ ಬಿ. ಬಾಲಕೃಷ್ಣ ಪೂಜಾರಿ, ಪ್ರದಾನ ಕಾರ್ಯದರ್ಶಿ ಹರೀಶ್ ಪರಪ್ಪಾಜೆ, ಕೋಶಾಧಿಕಾರಿ ಕೇಶವ ಗೌಡ ಕೊಂಗುಜೆ, ಉಪಾಧ್ಯಕ್ಷರಾದ ಹೊನ್ನಪ್ಪ ಗೌಡ ಸೋನಕುಮೇರು, ತಿಮ್ಮಪ್ಪ ಗೌಡ ಸೋನಕುಮೇರು,ವಿಶ್ವನಾಥ ಪೂಜಾರಿ ಕೊಲ್ಲಾಜೆ, ಆನುವಂಶಿಕ ಮೋಕ್ತೆಸರ ಕುಕ್ಕಪ್ಪ ಗೌಡ ಕೋಡಿಮಜಲು, ಆಡಳಿತ ಸಮಿತಿ ಅಧ್ಯಕ್ಷ ರಮೇಶ್ ಗೌಡ ಅಡ್ಡಾರು, ಕಾರ್ಯದರ್ಶಿ ಉಮೇಶ್ ಗೌಡ ಅಂಗಡಿಮಜಲು, ಮಹಿಳಾ ಸಮಿತಿ ಅಧ್ಯಕ್ಷೆ ಶ್ವೇತಾ ಹಾರ್ತ್ಯಾರು, ಭಜನಾ ಮಂಡಳಿ ಅಧ್ಯಕ್ಷ ಲಕ್ಷ್ಮಣ ಗೌಡ ಫಲಸದ ಕೋಡಿ, ಅರ್ಚಕ ಅನಂತರಾಮ ಶಬರಾಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ನಿವೃತ್ತ ಶಿಕ್ಷಕ ರಾಮಕೃಷ್ಣ ಭಟ್ ಚೊಕ್ಕಾಡಿ ನಿರೂಪಿಸಿ, ಯೋಜನೆಯ ಯೋಜನಾಧಿಕಾರಿ ಸುರೇಂದ್ರ ವಂದಿಸಿದರು. ಬಳಿಕ ಯಕ್ಷಗಾನ ಬಯಲಾಟ ನಡೆಯಿತು.