Site icon Suddi Belthangady

ಕುರಾಯ ಶ್ರೀ ಸದಾಶಿವ ದೇವರ ಸನ್ನಿಧಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

ಮೈರೋಳ್ತಾಡ್ಕ: ಜ. 13 ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ (ರಿ ) ಕಣಿಯೂರು ವಲಯದ ಮೈರೋಳ್ತಾಡ್ಕ ಒಕ್ಕೂಟದ ವತಿಯಿಂದ ಮಕರ ಸಂಕ್ರಾಂತಿ ಪ್ರಯುಕ್ತ ಕುರಾಯ ಶ್ರೀ ಸದಾಶಿವ ದೇವರ ಸನ್ನಿಧಿಯಲ್ಲಿ ಧಾರ್ಮಿಕ ಶ್ರದ್ದಾ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಲಾಯಿತು.

ದೇವಾಲಯದ ಒಳಾoಗಣವನ್ನು ಗುಡಿಸಿ ತೊಳೆದು ಸ್ವಚ್ಚಗೊಳಿಸಲಾಯಿತು. ಮತ್ತು ದೇವಾಲಯದ ಹೊರಾoಗಣದಲ್ಲಿ ಬೆಳೆದಿದ್ದ ಹುಲ್ಲು ಗಿಡಗಂಟಿಗಳನ್ನು ತೆಗೆದು ಗುಡಿಸಿ ಸ್ವಚ್ಛಗೊಳಿಸಲಾಯಿತು. ಈ ಶ್ರಮದಾನದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಬಾಬು ಗೌಡ, ಒಕ್ಕೂಟದ ಅಧ್ಯಕ್ಷ ಸುಂದರ ಪೂಜಾರಿ, ನಿಕಟ ಪೂರ್ವ ಅಧ್ಯಕ್ಷ ಕೃಷ್ಣಯ್ಯ ಆಚಾರ್ಯ, ಒಕ್ಕೂಟದ ಪದಾಧಿಕಾರಿಗಳು, ಸೇವಾ ಪ್ರತಿನಿಧಿ ಚಂದ್ರಕಲಾ ಹಾಗೂ ಒಕ್ಕೂಟದ ಸದಸ್ಯರು ಭಾಗವಹಿಸಿದರು. ಶ್ರಮದಾನದಲ್ಲಿ ಭಾಗವಹಿಸಿದ ಎಲ್ಲರಿಗೂ ವ್ಯವಸ್ಥಾಪನ ಸಮಿತಿಯವರು ಧನ್ಯವಾದ ಸಲ್ಲಿಸಿದರು.

Exit mobile version